Thursday, January 29, 2026
Google search engine
Homeಮುಖಪುಟರಾಜ್ಯದಲ್ಲಿ ಕಾಂಗ್ರೆಸ್ ಅಲೆ ಸಾಬೀತು -ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಸಾಬೀತು -ಸಿದ್ದರಾಮಯ್ಯ

ಚುನಾವಣೆಯಲ್ಲಿ ಹಣ ಖರ್ಚು ಮಾಡಿದರೆ ಗೆಲ್ಲಬಹುದು ಎಂಬ ಬಿಜೆಪಿ ಮುಖಂಡರ ಅವರ ಸೊಕ್ಕನ್ನು ರಾಜ್ಯದ ಜನ ಮುರಿದಿದ್ದಾರೆ. ಈ ಫಲಿತಾಂಶ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆ, ಭ್ರಷ್ಟಾಚಾರ ಮತ್ತು ದುರಾಡಳಿತಕ್ಕೆ ಜನತೆ ನೀಡಿರುವ ಸಂದೇಶ ಎಂದು ವ್ಯಾಖ್ಯಾನಿಸಿದ್ದಾರೆ.

ರಾಜ್ಯದ ಐದು ನಗರಸಭೆ, 58 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 59 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳನ್ನು ಪಡೆದು ಮೊದಲ ಸ್ಥಾನದಲ್ಲಿದ್ದರೆ, ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಜೆಡಿಎಸ್ ಮೂರನೇ ಸ್ಥಾನದಲ್ಲಿದೆ.

ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣ ಪಂಚಾಯ್ತಿ ಮತ್ತು ಬಂಕಾಪುರ ಪುರಸಭೆ ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಹೀಗಾಗಿ ಮುಖ್ಯಮಂತ್ರಿ ತವರಿನಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ಮುಖಭಂಗವಾಗಿದೆ.

ಕಾಂಗ್ರೆಸ್ ಪಕ್ಷ 166 ನಗರಸಭಾ ವಾರ್ಡುಗಳ ಪೈಕಿ 61 ಸ್ಥಾನಗಳನ್ನು ಗೆದ್ದುಕೊಂಡಿದೆ. 441 ಪುರಸಭಾ ವಾರ್ಡುಗಳ ಪೈಕಿ ಕಾಂಗ್ರೆಸ್ 201 ಸ್ಥಾನಗಳು ಮತ್ತು ಪಟ್ಟಣ ಪಂಚಾಯ್ತಿಯ 557 ವಾರ್ಡುಗಳ ಪೈಕಿ 236 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ.

ಬಿಜೆಪಿ ನಗರಸಭೆಯ 67 ವಾರ್ಡುಗಳು, ಪುರಸಭೆಯಲ್ಲಿ 176 ಹಾಗೂ ಪಟ್ಟಣ ಪಂಚಾಯ್ತಿಯಲ್ಲಿ 194 ವಾರ್ಡುಗಳಲ್ಲಿ ಜಯ ಸಾಧಿಸಿದೆ. ಜೆಡಿಎಸ್ ನಗರಸಭೆಯ 12 ವಾರ್ಡುಗಳಲ್ಲಿ, ಪುರಸಭೆಯ 21 ಸ್ಥಾನಗಳಲ್ಲಿ ಮತ್ತು ಪಟ್ಟಣ ಪಂಚಾಯ್ತಿಯ 12 ವಾರ್ಡುಗಳಲ್ಲಿ ಗೆಲುವು ಸಾಧಿಸಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 1,187 ಸ್ಥಾನಗಳ ಪೈಕಿ 500ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ‌ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂಬುದನ್ನು ಈ ಫಲಿತಾಂಶ ಇನ್ನೊಮ್ಮೆ ಸಾಬೀತು ಮಾಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ, ಮತ ನೀಡಿದ ಎಲ್ಲಾ ಮತದಾರರಿಗೆ ಮತ್ತು ಅಭ್ಯರ್ಥಿಗಳ ಪರವಾಗಿ ದುಡಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಧನ್ಯವಾದಗಳು ಹಾಗೂ ಜಯಗಳಿಸಿರುವ ನಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಹಣ ಖರ್ಚು ಮಾಡಿದರೆ ಗೆಲ್ಲಬಹುದು ಎಂಬ ಬಿಜೆಪಿ ಮುಖಂಡರ ಅವರ ಸೊಕ್ಕನ್ನು ರಾಜ್ಯದ ಜನ ಮುರಿದಿದ್ದಾರೆ. ಈ ಫಲಿತಾಂಶ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆ, ಭ್ರಷ್ಟಾಚಾರ ಮತ್ತು ದುರಾಡಳಿತಕ್ಕೆ ಜನತೆ ನೀಡಿರುವ ಸಂದೇಶ ಎಂದು ವ್ಯಾಖ್ಯಾನಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular