Thursday, November 14, 2024
Google search engine
Homeಮುಖಪುಟಕೊರಗರ ಮೇಲಿನ ಪ್ರಕರಣ ತಕ್ಷಣ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

ಕೊರಗರ ಮೇಲಿನ ಪ್ರಕರಣ ತಕ್ಷಣ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರಗರ ಮೇಲೆ ದಾಖಲಿಸಿರುವ ಪ್ರಕರಣವನ್ನು ತಕ್ಷಣ ವಾಪಸು ಪಡೆಯಲು ಮುಖ್ಯಮಂತ್ರಿಗಳು ಸೂಚನೆ ನೀಡಬೇಕು.ಕಾರಣಕರ್ತ ಪೊಲೀಸರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಭಾರತಕ್ಕಾಗಿ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ? ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ? ಎಂದು ಪ್ರಶ್ನಿಸಿದ್ದಾರೆ.

ದೌರ್ಜನ್ಯಕ್ಕೀಡಾದ ಕೊರಗರ ಪರ ಕಂಬನಿ ಮಿಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ ಪೊಲೀಸರು ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ? ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ, ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಎಸ್ ಸಿಪಿ/ಟಿಎಸ್ ಪಿ ಕಾಯ್ದೆ ಸೇರಿದಂತೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಹಣ ಮಂಜೂರು ಮಾಡದೆ ಆರ್ಥಿಕವಾಗಿ ದಲಿತರನ್ನು ಸಾಯಿಸುತ್ತಿರುವ ಕರ್ನಾಟಕ ಬಿಜೆಪಿ ಸರ್ಕಾರ, ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ ಎಂದು ದೂರಿದ್ದಾರೆ.

ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೌನ ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಸಮ್ಮತಿ ಎಂದು ಅರ್ಥೈಸೋಣವೇ ಎಂದು ವ್ಯಂಗ್ಯ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular