ಲಡಾಖ್ ನ ಪ್ಯಾಂಗೊಂಗ್ ತ್ಸೋ ಸರವೋರದ ಮೇಲೆ ವಾಸ್ತವಿಕ ನಿಯಂತ್ರಣ ರೇಖೆಯ ಬಳಿ ಚೀನಾ ಸೇತುವೆ ನಿರ್ಮಿಸುತ್ತಿದೆ ಎಂಬ ವರದಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮೌನ ವಹಿಸಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಪ್ರಧಾನಿಯವರು ಮೌನ ವಹಿಸಿದ್ದು, ಕಿವಿ ಕಿವುಡಾಗಿದೆ. ನಮ್ಮ ಭೂಮಿ, ನಮ್ಮ ಜನರು, ನಮ್ಮ ಗಡಿಗಳು ಹೆಚ್ಚು ಅರ್ಹವಾಗಿವೆ ಎಂದು ಗಾಂಧೀ ಟ್ವೀಟ್ ಮಾಡಿದ್ದಾರೆ.
ವಾಸ್ತವಿಕ ಗಡಿ ನಿಯಂತ್ರಣ ರೇಖೆಗೆ ಅತ್ಯಂತ ಸಮೀಪದಲ್ಲಿರುವ ಪ್ಯಾಂಗೊಂಗ್ ತ್ಸೋ ಸರೋವರದ ಮೇಲೆ ಚೀನಿಯರು ಎರಡು ತಿಂಗಳಿಂದ ಸೇತುವೆಯನ್ನು ನಿರ್ಮಿಸುತ್ತಿದ್ದಾರೆ ಎಂದು ಅವರು ವರದಿ ಉಲ್ಲೇಖಿಸಿದ್ದಾರೆ.
ಈ ಸೇತುವೆಯು ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯನ್ನು ಸಂಪರ್ಕಿಸುತ್ತದೆ ಎಂದು ವರದಿ ತಿಳಿಸಿದೆ.
ಪೂರ್ವ ಲಡಾಖ್ ನಲ್ಲಿ ಚೀನಾದೊಂದಿಗಿನ ಗಡಿ ಪರಿಸ್ಥಿತಿಯನ್ನು ಸರ್ಕಾರ ನಿಭಾಯಿಸುತ್ತಿರುವುದನ್ನು ಕಾಂಗ್ರೆಸ್ ಮತ್ತು ರಾಹುಲ್ ಟೀಕಿಸಿದ್ದಾರೆ. ಇಲ್ಲಿ ಕಳೆದ ವರ್ಷ ಭಾರತ ಮತ್ತು ವಾಸ್ತವಿಕ ಗಡಿ ನಿಯಂತ್ರಣ ರೇಖೆ ನಡುವೆ ಘರ್ಷಣೆ ನಡೆದಿತ್ತು.