ಲಖಿಂಪುರಖೇರಿ ರೈತರ ಹತ್ಯಾ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆಶಿಶ್ ಮಿಶ್ರಾ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು, ಅಲಹಾಬಾದ್ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ಆಶಿಶ್ ಮಿಶ್ರಾ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನಾಗಿದ್ದು, ಲಖಿಂಪುರಖೇರಿಯಲ್ಲಿ ಎಸ್.ಯು.ವಿ ವಾಹನ ಹರಿಸಿ ನಾಲ್ವರು ರೈತರು ಸೇರಿ ಎಂಟು ಮಂದಿ ಹತ್ಯೆಗೆ ಕಾರಣವಾಗಿದ್ದ. ಹಾಗಾಗಿ ಜಾಮೀನು ನೀಡುವಂತೆ ಆಶಿಶ್ ಅಲಹಾಬಾದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ನ್ಯಾಯಮೂರ್ತಿ ರಾಜೀವ್ ಸಿಂಗ್ ಆದೇಶ ಕಾಯ್ದಿರಿಸಿದ್ದು ಜನವರಿ 11ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
ಇತ್ತೀಚೆಗಷ್ಟೇ ವಿಶೇಷ ತನಿಖಾ ತಂಡ ಲಖಿಂಪುರಖೇರಿ ರೈತರ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ದೋಷಾರೋಪ ಪಟ್ಟಿಯಲ್ಲಿ ವೀರೇಂದ್ರ ಶುಕ್ಲಾ ಆರೋಪಿ ಆಶಿಶ್ ಮಿಶ್ರಾನ ಸಂಬಂಧಿ ಎಂದು ಹೇಳಿದೆ.
ನವೆಂಬರ್ 2021ರಲ್ಲಿ ಉತ್ತರ ಪ್ರದೇಶದ ಸ್ಥಳೀಯ ನ್ಯಾಯಾಲಯ ಆರೋಪಿ ಆಶಿಶ್ ಮಿಶ್ರಾನ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.