Friday, September 20, 2024
Google search engine
Homeಮುಖಪುಟಪ್ರಾಣ ಹೋದರೂ ನೀರಿಗಾಗಿ ನಡಿಗೆ ನಿಲ್ಲದು - ಡಿಕೆಶಿ

ಪ್ರಾಣ ಹೋದರೂ ನೀರಿಗಾಗಿ ನಡಿಗೆ ನಿಲ್ಲದು – ಡಿಕೆಶಿ

ನಮ್ಮ ಕಾರ್ಯಕ್ರಮ ಮೊಟಕುಗೊಳಿಸಲು, ಯಾರಿಗೂ ರೂಮ್ ಕೊಡಬೇಡಿ, ಹೊಟೇಲ್, ರೆಸ್ಟೋರೆಂಟ್ ಮುಚ್ಚಿಸಿ ಎಂದು ಜಿಲ್ಲಾಧಿಕಾರಿಗಳ ಮೂಲಕ ವಿಶೇಷ ಆದೇಶ ಹೊರಡಿಸಿದೆ. ರಾಮನಗರದ ಜಿಲ್ಲಾಧಿಕಾರಿ ಮೂಲಕ ಮೇಕೆದಾಟು, ಚುಂಚಿ ಫಾಲ್ಸ್, ಕೆಲವು ಬೆಟ್ಟ, ಸಂಗಮ ಹಾಗೂ ಇತರೆ ಪ್ರವಾಸಿ ತಾಣಗಳಿಗೆ ಯಾರೂ ಹೋಗದಂತೆ ಆದೇಶ ಹೊರಡಿಸುವಂತೆ ಮಾಡಿದೆ ಎಂದು ದೂರಿದರು.

ನನ್ನ ಪ್ರಾಣ ಹೋದರೂ ಸರಿ, ರಾಜ್ಯದ ಜನರ ಕುಡಿಯುವ ನೀರಿಗಾಗಿ ಮಾಡುತ್ತಿರುವ ಮೇಕೆದಾಟು ನಡಿಗೆ ಮಾಡಿಯೇ ತೀರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುನರುಚ್ಛರಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಪಾದಯಾತ್ರೆ ಮೊಟಕುಗೊಳಿಸಲು ಷಡ್ಯಂತ್ರ ರೂಪಿಸುತ್ತಿದ್ದು, ಬಿಜೆಪಿ ಸರ್ಕಾರ ಕೆಳಮಟ್ಟದ ರಾಜಕೀಯಕ್ಕಾಗಿ ಜನಸಾಮಾನ್ಯರ ಜೀವನದ ಜತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಉತ್ಪ್ರೇಕ್ಷೆಯಿಂದ ಕೋವಿಡ್ ಸಂಖ್ಯೆ ಹೆಚ್ಚಳ ಮಾಡಿ, ರಾಜ್ಯದಲ್ಲಿ ನಿರ್ಬಂಧ ಹೇರಿದೆ. ಕುಡಿಯುವ ನೀರಿಗಾಗಿ ನಡೆಯುವ ಪಾದಯಾತ್ರೆಗೆ ಸಿಗುತ್ತಿರುವ ವ್ಯಾಪಕ ಬೆಂಬಲ ಸಹಿಸಲಾಗದೇ, ಚುನಾವಣೆಯಲ್ಲಿನ ಸೋಲು ಅರಗಿಸಿಕೊಳ್ಳಲು ಆಗದೇ ನಮ್ಮ ಯಾತ್ರೆ ತಡೆಯಲು ಸಂಚು ರೂಪಿಸಿದೆ ಎಂದು ಟೀಕಿಸಿದರು.

ನಮ್ಮ ಕಾರ್ಯಕ್ರಮ ಮೊಟಕುಗೊಳಿಸಲು, ಯಾರಿಗೂ ರೂಮ್ ಕೊಡಬೇಡಿ, ಹೊಟೇಲ್, ರೆಸ್ಟೋರೆಂಟ್ ಮುಚ್ಚಿಸಿ ಎಂದು ಜಿಲ್ಲಾಧಿಕಾರಿಗಳ ಮೂಲಕ ವಿಶೇಷ ಆದೇಶ ಹೊರಡಿಸಿದೆ. ರಾಮನಗರದ ಜಿಲ್ಲಾಧಿಕಾರಿ ಮೂಲಕ ಮೇಕೆದಾಟು, ಚುಂಚಿ ಫಾಲ್ಸ್, ಕೆಲವು ಬೆಟ್ಟ, ಸಂಗಮ ಹಾಗೂ ಇತರೆ ಪ್ರವಾಸಿ ತಾಣಗಳಿಗೆ ಯಾರೂ ಹೋಗದಂತೆ ಆದೇಶ ಹೊರಡಿಸುವಂತೆ ಮಾಡಿದೆ ಎಂದು ದೂರಿದರು.

ನಾನು ಮುಖ್ಯಮಂತ್ರಿಗೆ ಪತ್ರ ಬರೆದು ಇಂತಹ ಕ್ಷುಲ್ಲಕ ರಾಜಕಾರಣ ಮಾಡಬೇಡಿ. ರಾಜಕಾರಣ ಮಾಡುವ ಸಮಯದಲ್ಲಿ ಮಾಡೋಣ. ರಾಜ್ಯದ ಎಲ್ಲ ಹೊಟೇಲ್, ವ್ಯಾಪಾರ ವಹಿವಾಟು ಮುಚ್ಚಿಸುವ ನಿಮ್ಮ ನಿರ್ಬಂಧ ಸರಿಯಲ್ಲ. ಇದು ಒಮಿಕ್ರಾನ್ ಅಲ್ಲ, ಇದು ಬಿಜೆಪಿಯ ಕಾಯಿಲೆ. ನಿಮ್ಮ ಹೆಸರಿನ ಮುಂದೆ ಇರುವ ಕರ್ಫ್ಯೂ. ಇದನ್ನು ಮಾಡಬೇಡಿ. ಸಾರ್ವಜನಿಕರ ಬದುಕಿಗೆ ಅವರ ವಹಿವಾಟಿಗೆ ತೊಂದರೆ ಮಾಡಬೇಡಿ. ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಹಿಂಪಡೆಯಿರಿ ಎಂದು ಒತ್ತಾಯಿಸಿದರು.

ಪಾದಯಾತ್ರೆ ಹಿನ್ನೆಲೆಯಲ್ಲಿ ನಾವು 15 ದಿನ, ಒಂದು ವಾರ ಮುಂಚಿತವಾಗಿ ರಾಮನಗರದ ಎಲ್ಲ ರೆಸಾರ್ಟ್, ಹೊಟೇಲ್ ಗಳಲ್ಲಿ ಕೊಠಡಿ ಕಾಯ್ದಿರಿಸಿದ್ದೇವೆ. ಸರ್ಕಾರ ನಮಗೆ ಜಾಗ ನೀಡದಿದ್ದರೂ ಪರ್ವಾಗಿಲ್ಲ, ಹೊಳೆ, ನದಿ ಪಕ್ಕ ಮರಗಳ ಕೆಳಗೆ ಹಾಸಿಗೆ ಹಾಕಿಕೊಂಡು ಮಲಗುತ್ತೇವೆ. ಆದರೆ ನಿಮ್ಮ ರಾಜಕಾರಣಕ್ಕಾಗಿ ಇಡೀ ರಾಜ್ಯದ ಜನರಿಗೆ ತೊಂದರೆ ಯಾಕೆ ನೀಡುತ್ತಿದ್ದೀರಿ? ಕೂಲಿ ಕಾರ್ಮಿಕರ ಪರಿಸ್ಥಿತಿ ಏನಾಗಬೇಕು. ಚಾಲಕರ ಪರಿಸ್ಥಿತಿ ಏನಾಗಬೇಕು? ಅವರ ಬದುಕು ಏನಾಗಬೇಕು? ಇದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಹೇಳಿದರು.

ಸರ್ಕಾರ ಏನೇ ಹೊಟೇಲ್ ಬಂದ್ ಮಾಡಿಸಿದರೂ ಪಾದಯಾತ್ರೆಗೆ ಐದು ಸಾವಿರವಲ್ಲ ಹತ್ತು ಸಾವಿರ ಜನ ಬಂದರೂ ಅವರಿಗೆ, ಪೊಲೀಸರಿಗೆ ಸೇರಿ ಎಲ್ಲರಿಗೂ ಉಳಿದುಕೊಳ್ಳುವ ಹಾಗೂ ಊಟದ ವ್ಯವಸ್ಥೆ ಮಾಡುವ ಶಕ್ತಿ ನನ್ನ ಕ್ಷೇತ್ರದ ಜನತೆಗೆ ಇದೆ. ನಾವು ಪೊಲೀಸರಿಗೆ, ಮಾಧ್ಯಮದವರಿಗೂ ಕೊಠಡಿ ಬುಕ್ ಮಾಡಿದ್ದರೂ ಅದನ್ನು ನೀಡಬಾರದು ಎಂದು ಹೇಳಿದ್ದಾರೆ. ರಾಜಕಾರಣದಲ್ಲಿ ಯಾವುದೂ ಶಾಶ್ವತವಲ್ಲ. ಈ ಹೋರಾಟದಲ್ಲಿ ನಮ್ಮ ಪ್ರಾಣ ಹೋದರೂ ಚಿಂತೆಯಿಲ್ಲ. ನಾವು ನೀರಿಗಾಗಿ ನಡೆಯುತ್ತಿದ್ದು, ಕಾವೇರಿ ಜಲಾನಯನ ಪ್ರದೇಶದ ರೈತರು ಹಾಗೂ ಜನರ ಕುಡಿಯುವ ನೀರಿಗೆ ನಮ್ಮ ಹೊರಾಟ ಎಂದು ಸ್ಪಷ್ಟಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular