ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು ಒಟ್ಟು ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ.
ಫೆಬ್ರವರ 10ರಂದು ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಲಿದೆ. ಎರಡನೇ ಹಂತದಲ್ಲಿ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ ಮತ್ತು ಫೆಬ್ರವರಿ 14ರಂದು ಗೋವಾದಲ್ಲಿ ಮತದಾನ ನಡೆಯಲಿದೆ. ಮೂರನೇ ಮತ್ತು ನಾಲ್ಕನೇ ಹಂತದಲ್ಲಿ ಉತ್ತರ ಪ್ರದೇಶದಲ್ಲಿ ಫೆಬ್ರವರಿ 20 ಮತ್ತು 23ರಂದು ಮತದಾನ ನಡೆಯಲಿದೆ.
ಫೆಬ್ರವರಿ 27ರಂದು ಐದನೇ ಹಂತದಲ್ಲಿ ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮತ್ತು ಮಾರ್ಚ್ 3ರಂದು ಆರನೇ ಹಂತದಲ್ಲಿ ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 7 ರಂದು ಯುಪಿಯಲ್ಲಿ ಚುನಾವಣೆ ನಡೆಯಲಿದೆ.
ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಉತ್ತರ ಪ್ರದೇಶ – 403 ಸ್ಥಾನಗಳು
ಪಂಜಾಬ್ – 117 ಸ್ಥಾನಗಳು
ಉತ್ತರಾಖಂಡ್ – 70 ಸ್ಥಾನಗಳು
ಮಣಿಪುರ – 60 ಸ್ಥಾನಗಳು
ಗೋವಾ – 40 ಸ್ಥಾನಗಳು
ಒಟ್ಟು 690 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಪಂಚರಾಜ್ಯಗಳಲ್ಲಿ 8.5 ಕೋಟಿ ಮಹಿಳೆಯರು ಸೇರಿ 18 ಕೋಟಿಗೂ ಹೆಚ್ಚು ಮತದಾರರು ಮತ ಚಲಾಯಿಸುವ ಅರ್ಹತೆ ಹೊಂದಿದ್ದಾರೆ. ಕೊವಿಡ್ ಹಿನ್ನೆಲೆಯಲ್ಲಿ ಮತಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮಹಿಳಾ ಮತದಾರರನ್ನು ಉತ್ತೇಜಿಸಲು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಒಂದು ಮತಗಟ್ಟೆಗೆ ಮಹಿಳಾ ಸಿಬ್ಬಂದಿ ನೇಮಕ ಮಾಡಲಾಗುವುದು. ]
80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷ ಚೇತನರು ಮತ್ತು ಕೊವಿಡ್ ರೋಗಿಗಳಿಗೆ ಅಂಚೆ ಮತಪತ್ರವನ್ನು ನೀಡಲು ತೀರ್ಮಾನಿಸಲಾಗಿದೆ.