ಹಿರಿಯ ಸಾಹಿತಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಣವಿ ಅವರ ಆರೋಗ್ಯದ ಬಗ್ಗೆ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಚೆನ್ನವೀರ ಕಣವಿ ಅವರು ಶೀಘ್ರ ಗುಣಮುಖರಾಗಲೆಂದು ಮುಖ್ಯಮಂತ್ರಿ ಬೊಮ್ಮಾಯಿ ಹಾರೈಸಿದ್ದಾರೆ.