Friday, September 20, 2024
Google search engine
Homeಮುಖಪುಟಯುಪಿ ಚುನಾವಣೆ - ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ - 16 ಮಹಿಳೆಯರಿಗೆ ಟಿಕೆಟ್ ನೀಡಿದ...

ಯುಪಿ ಚುನಾವಣೆ – ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ – 16 ಮಹಿಳೆಯರಿಗೆ ಟಿಕೆಟ್ ನೀಡಿದ ಕಾಂಗ್ರೆಸ್

ಇದುವರೆಗೆ ಪ್ರಕಟಿಸಿರುವ 166 ಅಭ್ಯರ್ಥಿಗಳಲ್ಲಿ 66 ಮಹಿಳಾ ಅಭ್ಯರ್ಥಿಗಳಿಗೆ ಟಿಕಟ್ ನೀಡಲಾಗಿದೆ. ಎಐಸಿಸಿ ನಾಯಕಿ ಪ್ರಿಯಾಂಕ ಗಾಂಧಿ ಈ ಬಾರಿಯ ಚುನಾವಣೆಯಲ್ಲಿ ಶೇ.40ಕ್ಕೂ ಹೆಚ್ಚು ಮಂದಿ ಮಹಿಳೆಯರಿಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು.

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ನಡುವೆಯೇ ಕಾಂಗ್ರೆಸ್ ಇಂದು ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ಕಂಡುಬಂದಿದೆ.

ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ್ದು, ಸುಖ್ವಿಂದರ್ ಕೌರ್ ಅವರನ್ನು ಸಹರಾನ್ ಪುರ ಕ್ಷೇತ್ರಕ್ಕೆ, ಪೂನಂ ಪಂಡಿತ್ ಅವರನ್ನು ಶ್ಯಾನ್ ಕ್ಷೇತ್ರಕ್ಕೆ ಮತ್ತು ಡಾ.ಯಸ್ಮೀನ್ ರಾಣ ಅವರನ್ನು ಚಾರ್ತಲಾಲ್ ಕ್ಷೇತ್ರಕ್ಕೆ ಅಭ್ಯರ್ಥಿಗಳೆಂದು ಘೋಷಿಸಲಾಗಿದೆ.

ಇದುವರೆಗೆ ಪ್ರಕಟಿಸಿರುವ 166 ಅಭ್ಯರ್ಥಿಗಳಲ್ಲಿ 66 ಮಹಿಳಾ ಅಭ್ಯರ್ಥಿಗಳಿಗೆ ಟಿಕಟ್ ನೀಡಲಾಗಿದೆ. ಎಐಸಿಸಿ ನಾಯಕಿ ಪ್ರಿಯಾಂಕ ಗಾಂಧಿ ಈ ಬಾರಿಯ ಚುನಾವಣೆಯಲ್ಲಿ ಶೇ.40ಕ್ಕೂ ಹೆಚ್ಚು ಮಂದಿ ಮಹಿಳೆಯರಿಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು.

ಈಗ ಬಿಡುಗಡೆ ಮಾಡಿರುವ 2ನೇ ಪಟ್ಟಿಯಲ್ಲಿ ಉನ್ನಾವೋ ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಯ ತಾಯಿ, ಆಶಾ ಕಾರ್ಯಕರ್ತೆ ಪೂನಂ ಪಾಂಡೆ, ಪತ್ರಕರ್ತೆ ನಿದಾ ಅಹಮದ್, ಸಾಮಾಜಿಕ ಕಾರ್ಯಕರ್ತ ಸದಾಪ್ ಜಾಫರ್ ಹೆಸರುಗಳಿವೆ ಎಂದು ನ್ಯಾಷನಲ್ ಹೆರಾಲ್ಡ್ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular