Friday, September 20, 2024
Google search engine
Homeಮುಖಪುಟಹೆಚ್ಚುವರಿ ತರಗತಿ ಹೊರೆ, ಅತಿಥಿ ಉಪನ್ಯಾಸಕರ ಕೈಬಿಡುವ ನಿರ್ಧಾರದಿಂದ ಹಿಂದೆ ಸರಿಯಲಿ - ಪ್ರತಿಭಟನಾಕಾರರ ಆಗ್ರಹ

ಹೆಚ್ಚುವರಿ ತರಗತಿ ಹೊರೆ, ಅತಿಥಿ ಉಪನ್ಯಾಸಕರ ಕೈಬಿಡುವ ನಿರ್ಧಾರದಿಂದ ಹಿಂದೆ ಸರಿಯಲಿ – ಪ್ರತಿಭಟನಾಕಾರರ ಆಗ್ರಹ

ಸರ್ಕಾರ ತೆಗೆದುಕೊಂಡಿರುವ ತೀರ್ಮಾನ ಅವೈಜ್ಞಾನಿಕವಾಗಿದೆ. ಹೆಚ್ಚುವರಿ ತರಗತಿಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಹೇರುವ ಮೂಲಕ ಈಗಾಗಲೇ ಕೆಲಸ ನಿರ್ವಹಿಸುತ್ತಿರುವ ಸುಮಾರು 7 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಮನೆಗೆ ಹೋಗುವಂತಹ ವಾತಾವರಣ ಸೃಷ್ಟಿಯಾಗಿದೆ ಎಂದು ಅತಿಥಿ ಉಪನ್ಯಾಸಕರು ದೂರಿದ್ದಾರೆ.

ಅತಿಥಿ ಉಪನ್ಯಾಸಕರ ಧರಣಿ ಮುಂದುವರೆದಿದ್ದು ಬೇಡಿಕೆಗಳನ್ನು ಈಡೇರಿಸುವವರೆಗೂ ಧರಣಿಯನ್ನು ಹಿಂಪಡೆಯ ಪ್ರಶ್ನೆಯೇ ಇಲ್ಲ ಎಂದು ಅತಿಥಿ ಉಪನ್ಯಾಸಕರು ಪಟ್ಟುಹಿಡಿದ್ದಾರೆ.

ರಾಜ್ಯದ ಎಲ್ಲಾ ಪ್ರಮುಖ ಕೇಂದ್ರಗಳು ಪ್ರತಿಭಟನೆಗಳು ತೀವ್ರಗೊಂಡಿವೆ. ಈ ನಡುವೆ ಸರ್ಕಾರ 13ಸಾವಿರ ರೂಪಾಯಿ ಗೌರವ ಧನ ಪಡೆಯುತ್ತಿದ್ದವರಿಗೆ 32 ಸಾವಿರ ರೂಗಳಿಗೆ ಹೆಚ್ಚಳ ಮಾಡಿದೆ. ಜೊತೆಗೆ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಳ್ಳಬೇಕು ಎಂದು ಸರ್ಕಾರ ಹೇಳಿದೆ.

ಸರ್ಕಾರ ತೆಗೆದುಕೊಂಡಿರುವ ತೀರ್ಮಾನ ಅವೈಜ್ಞಾನಿಕವಾಗಿದೆ. ಹೆಚ್ಚುವರಿ ತರಗತಿಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಹೇರುವ ಮೂಲಕ ಈಗಾಗಲೇ ಕೆಲಸ ನಿರ್ವಹಿಸುತ್ತಿರುವ ಸುಮಾರು 7 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಮನೆಗೆ ಹೋಗುವಂತಹ ವಾತಾವರಣ ಸೃಷ್ಟಿಯಾಗಿದೆ ಎಂದು ಅತಿಥಿ ಉಪನ್ಯಾಸಕರು ದೂರಿದ್ದಾರೆ.

ಈವರೆಗೆ ಕೆಲಸ ನಿರ್ವಹಿಸಿರುವ ಅತಿಥಿ ಉಪನ್ಯಾಸಕರು ಮುಂದಿನ ಭವಿಷ್ಯ ಏನು? ಎಂಬ ಬಗ್ಗೆ ಸರ್ಕಾರ ಗಮನಹರಿಸಬೇಕು. ಹಾಗಾಗಿ ಹೆಚ್ಚುವರಿ ಕೆಲಸವನ್ನು ಹೇರುವ ಮೂಲಕ ನಮ್ಮಲ್ಲೇ ಒಡಕು ಮೂಡಿಸುವ ಪ್ರಯತ್ನ ನಡೆಯುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಈಗಾಗಲೇ ಉನ್ನತ ಶಿಕ್ಷಣ ಸಚಿವರು, ಪ್ರಾಥಮಿಕ ಶಿಕ್ಷಣ ಸಚಿವರು ಹಾಗೂ ಪ್ರತಿಪಕ್ಷಗಳ ನಾಯಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಆದರೂ ಸರ್ಕಾರ ಗೌರವ ಧನ ಹೆಚ್ಚಿಸಿದಂತೆ ಮಾಡಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಕೆಲಸ ಇಲ್ಲದಂತೆ ಸರಿಯಾದ ಕ್ರಮವಲ್ಲ ಎಂದು ಧರಣಿ ನಿರತ ಅತಿಥಿ ಉಪನ್ಯಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಈಗ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular