Friday, January 30, 2026
Google search engine
Homeಮುಖಪುಟಗಣರಾಜ್ಯೋತ್ಸವಕ್ಕೆ ಗೈರಾಗಿ ಸಂವಿಧಾನಕ್ಕೆ ಅವಮಾನ ಮಾಡಿದ ಸಚಿವ ಮಾಧುಸ್ವಾಮಿ ರಾಜಿನಾಮೆಗೆ ಆಗ್ರಹ

ಗಣರಾಜ್ಯೋತ್ಸವಕ್ಕೆ ಗೈರಾಗಿ ಸಂವಿಧಾನಕ್ಕೆ ಅವಮಾನ ಮಾಡಿದ ಸಚಿವ ಮಾಧುಸ್ವಾಮಿ ರಾಜಿನಾಮೆಗೆ ಆಗ್ರಹ

ಸಚಿವ ಮಾಧುಸ್ವಾಮಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ನೈತಿಕತೆ ಇದ್ದರೆ, ಸಂವಿಧಾನದ ಬಗ್ಗೆ ಗೌರವ ಇದ್ದರೆ, ಸಮಾಜವಾದಿ ನಂಬಿಕೆಗಳಲ್ಲಿ ಆಸಕ್ತಿ ಇದ್ದರೆ ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ದಲಿತ ಮುಖಂಡರು ಒತ್ತಾಯಿಸಿದ್ದಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಗೈರು ಹಾಜರಿಯಾಗಿರುವುದಕ್ಕೆ ದಲಿತ ಮುಖಂಡರು ಮತ್ತು ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಸಚಿವ ಮಾಧುಸ್ವಾಮಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ನೈತಿಕತೆ ಇದ್ದರೆ, ಸಂವಿಧಾನದ ಬಗ್ಗೆ ಗೌರವ ಇದ್ದರೆ, ಸಮಾಜವಾದಿ ನಂಬಿಕೆಗಳಲ್ಲಿ ಆಸಕ್ತಿ ಇದ್ದರೆ ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ದಲಿತ ಮುಖಂಡರು ಒತ್ತಾಯಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಬಗ್ಗೆ ಅವರಿಗೆ ಬೇಸರವಿರಬಹುದು. ಆ ನೋವು ನಮಗೆ ಅರ್ಥವಾಗುತ್ತದೆ. ಅವರಿಗೆ ಜಿಲ್ಲಾ ಉಸ್ತುವಾರಿಯನ್ನು ವಹಿಸಬೇಕಿತ್ತು ಎಂಬುದೂ ನಮ್ಮ ಒತ್ತಾಯ. ಆದರೆ ಈ ವಿಷಯವನ್ನು ಮುಂದಿಟ್ಟುಕೊಂಡು ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ ದಿನದಂದೇ ಗಣರಾಜ್ಯೋತ್ಸವ ಕಾರ್ಯಕ್ರಮ ಬಾರದೇ ಇರುವುದು ನೋವು ತಂದಿದೆ ಎಂದು ದಲಿತ ಮುಖಂಡರು ಹೇಳಿದ್ದಾರೆ.

ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕರಾಗಿದ್ದಾರೆ. ಕಾನೂನು ಸಚಿವರಾಗಿದ್ದಾರೆ. ನೀರಾವರಿ ಸಚಿವರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ಮಾಡಿದ್ದರು. ಯಾಕೆ ಗೈರುಹಾಜರಿಯಾಗಿದ್ದಾರೆ ಎಂಬುದನ್ನು ಅಧಿಕಾರಿಗಳನ್ನು ದಲಿತ ಮುಖಂಡರು ಪ್ರಶ್ನಿಸುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಈ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದು ಅಧಿಕಾರಿಗಳನ್ನು ಕೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಮಹಿಳಾ ಅಧಿಕಾರಿಯೊಬ್ಬರು ಸಚಿವರು ಬೇರೆ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ಉದ್ಘಾಟನೆ ಕಾರ್ಯಕ್ರಮ ಎನ್ನುತ್ತಿದ್ದಂತೆಯೇ, ಪ್ರತಿಭಟನಾ ಕಾರರು ಗಣರಾಜ್ಯೋತ್ಸವಕ್ಕಿಂದ ಉದ್ಘಾಟನೆ ಮುಖ್ಯವಾಯಿತೇ ಎಂದು ಪ್ರಶ್ನಿಸಿದ್ದಾರೆ. ಕಾನೂನು ಸಚಿವರು ಅಂಬೇಡ್ಕರ್ ಬರೆದ ಸಂವಿಧಾನಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಹೇಳಬೇಕಾಗುತ್ತದೆ ಎಂದಿದ್ದಾರೆ. ಅದಕ್ಕೆ ಮಹಿಳಾ ಅಧಿಕಾರಿ ಮೌನಕ್ಕೆ ಜಾರಿದ್ದಾರೆ.

ದೇಶಾದ್ಯಂತ 73 ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂಬೇಡ್ಕರ್ ಜನವರಿ 26ರಂದು ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ ದಿನ. ಇಂಥ ಕಾರ್ಯಕ್ರಮಕ್ಕೆ ಸಚಿವ ಮಾಧುಸ್ವಾಮಿ ಬರಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರಿಂದ ತೆಗೆದುಹಾಕಿರುವುದಕ್ಕೆ ನಮಗೂ ಬೇಸರವಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ನೈತಿಕತೆ ಇದ್ದರೆ, ಸಮಾಜವಾದಿಯಾಗಿದ್ದರೆ, ಸಂವಿಧಾನಕ್ಕೆ ಗೌರವ ಕೊಡುವವರು ಆಗಿದ್ದರೆ, ಕಾನೂನು ಪದವೀಧರರಾಗಿದ್ದರೆ ನೀವು ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular