Thursday, September 19, 2024
Google search engine
HomeUncategorizedದೆಹಲಿ :ಸಾಮೂಹಿಕ ಅತ್ಯಾಚಾರ ಮಾಡಿ ಮಹಿಳೆಯ ಮೆರವಣಿಗೆ

ದೆಹಲಿ :ಸಾಮೂಹಿಕ ಅತ್ಯಾಚಾರ ಮಾಡಿ ಮಹಿಳೆಯ ಮೆರವಣಿಗೆ

ಸಂತ್ರಸ್ತೆಯ ಮುಖಕ್ಕೆ ಮಸಿ ಬಳಿದು ಮೆರವಣಿಗೆ ನಡೆಸಲಾಗಿದೆ. ತನ್ನ ಮೇಲೆ ಅತ್ಯಾಚಾರ ಮಾಡಲು ಪುರುಷರನ್ನು ಪ್ರಚೋದಿಸಿದ ಹಲವು ಮಹಿಳೆಯರ ಸಮ್ಮುಖದಲ್ಲಿ ಮೂವರು ಪುರುಷರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಹೇಳಿಕೊಂಡಿದ್ದಾರೆ.

20 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯನ್ನು ಥಳಿಸಿ, ಬೂಟುಗಳ ಮಾಲೆ ಹಾಕಿ ಸಾರ್ವಜನಿಕ ಪ್ರದೇಶದಲ್ಲಿ ಮೆರವಣಿಗೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಗುರುತಿಸಿರುವ ಪೊಲೀಸರು 7 ಮಂದಿ ಮಹಿಳೆಯರು ಮತ್ತು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಮೆರವಣಿಗೆ ನಡೆಸುತ್ತಿರುವ ವಿಡಿಯೋ ಭಾರೀ ವೈರಲ್ ಆಗಿದೆ. ದೃಶ್ಯದಲ್ಲಿ ಮಹಿಳೆಯರು ಸಂತ್ರಸ್ತೆಯನ್ನು ಥಳಿಸುತ್ತಿರುವುದು ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.

ಸಂತ್ರಸ್ತೆಯ ಮುಖಕ್ಕೆ ಮಸಿ ಬಳಿದು ಮೆರವಣಿಗೆ ನಡೆಸಲಾಗಿದೆ. ತನ್ನ ಮೇಲೆ ಅತ್ಯಾಚಾರ ಮಾಡಲು ಪುರುಷರನ್ನು ಪ್ರಚೋದಿಸಿದ ಹಲವು ಮಹಿಳೆಯರ ಸಮ್ಮುಖದಲ್ಲಿ ಮೂವರು ಪುರುಷರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಹೇಳಿಕೊಂಡಿದ್ದಾರೆ.

ಮಹಿಳೆಯನ್ನು ಅಮಾನುಷವಾಗಿ ಥಳಿಸಿರುವ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿವೆ. ಆಕೆಯ ದೇಹದಲ್ಲಿ ಗಾಯದ ಗುರುತುಗಳು ಕಂಡು ಬಂದಿವೆ ಎಂದು ಮಹಿಳಾ ಆಯೋಗ ಹೇಳಿದೆ. ಆರೋಪಿಗಳು ಅಕ್ರಮ ಡ್ರಗ್ಸ್ ಮತ್ತು ಮದ್ಯದ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ದೂರಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 7 ಮಂದಿ ಮಹಿಳೆಯರನ್ನು ಬಂಧಿಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ ಎಂದು ಡಿಸಿಪಿ ಸಹದಾರ್ ಆರ್ ಸತ್ಯಸುಂದರಂ ಹೇಳಿಕೆ ಉಲ್ಲೇಖಿಸಿ ನ್ಯು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular