ಪಂಜಾಬ್ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲಾ ನಗರಗಳಲ್ಲಿ ಮೊಹಲ್ಲಾ ಚಿಕಿತ್ಸಾಲಯಗಳನ್ನು ಆರಂಭಿಸಿ, ನಿರಂತರ ವಿದ್ಯುತ್ ಮತ್ತು ನೀರು ಪೂರೈಕೆ ಮಾಡುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದರು.
ನಾವು ಅಧಿಕಾರಕ್ಕೆ ಬಂದರೆ ಯಾವುದೇ ಹೊಸ ತೆರಿಗೆಗಳನ್ನು ವಿಧಿಸುವುದಿಲ್ಲ. ಜೊತೆಗೆ ಈಗಿರುವ ತೆರಿಗೆಯನ್ನು ಹೆಚ್ಚಿಸುವುದಿಲ್ಲ ಎಂದು ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಜಲಂಧರ್ ನಲ್ಲಿ ವ್ಯಾಪಾರಿಗಳು ಮತ್ತು ಉದ್ಯಮಿಗಳೊಂದಿಗಿನ ಸಭೆಯ ನಂತರ ಮತದಾರರಿಗೆ ಹಲವು ಖಾತರಿಗಳನ್ನು ಘೋಷಿಸಿದರು.
ಸರಿಯಾದ ಒಳಚರಂಡಿ ವ್ಯವಸ್ಥೆ, ಘನತ್ಯಾಜ್ಯ ನಿರ್ವಹಣೆಯೊಂದಿಗೆ ಸ್ವಚ್ಛ ನಗರಗಳು, ಸರ್ಕಾರಿ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದು, ನೆಲದಡಿಯಲ್ಲಿ ಇರುವ ವಿದ್ಯುತ್ ತಂತಿಗಳ ಸಿಕ್ಕುಗಳನ್ನು ಭೂಗತ ಕೇಬಲ್ ಗಳಿಂದ ಬದಲಾಯಿಸಲಾಗುವುದು ಎಂದರು.
ಸರ್ಕಾರಿ ಆಸ್ಪತ್ರೆಗಳ ನಿವೀಕರಣ ಮತ್ತು ಮೊಹಲ್ಲಾ ಕ್ಲಿನಿಕ್ ಗಳನ್ನು ತೆರೆಯುವುದು, ಸರ್ಕಾರಿ ಶಾಲೆಗಳ ಪುನರುಜ್ಜೀವನಗೊಳಿಸುವುದು ಆಮ್ ಆದ್ಮಿ ಪಕ್ಷ ನೀಡುತ್ತಿರುವ ಭರವಸೆಗಳಾಗಿವೆ ಎಂದು ತಿಳಿಸಿದರು.
ನಿರಂತರ ವಿದ್ಯುತ್ ಮತ್ತು ನೀರು ಪೂರೈಕೆ ಮಹಿಳೆಯರ ಭದ್ರತೆಯನ್ನು ಹೆಚ್ಚಿಸಲು ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳು ಮತ್ತು ಮಾರುಕಟ್ಟೆಗಳಲ್ಲಿ ಪಾರ್ಕಿಂಗ್ ಮತ್ತು ಶೌಚಾಲಯಗಳ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.
ದೆಹಲಿಯಲ್ಲಿ ನಮ್ಮ ಸರ್ಕಾರ ಸಾರ್ವಜನಿಕ ಕಣ್ಗಾವಲು ಹೆಚ್ಚಿಸುವ ಮೂಲಕ ಮಹಿಳೆಯರ ವಿರುದ್ಧದ ಅಪರಾಧಗಳನ್ನು ಕಡಿಮೆ ಮಾಡಿದ್ದೇವೆ ಎಂದು ಕೇಜ್ರಿವಾಲ್ ಪ್ರತಿಪಾದಿಸಿರು.
ವಿವಿಧ ಕ್ಷೇತ್ತಗಳಿಗೆ ವಿವಿಧ ಭರವಸೆಗಳನ್ನು ಘೋಷಿಸಿದ ನಂತರ ನಗರ ಪ್ರದೇಶಗಳ ಜನರು ಪಕ್ಷದಿಂದ ಖತರಿಪಡಿಸುವಂತೆ ಕೇಳಿದ್ದಾರೆ ಎಂದರು.


