Monday, September 16, 2024
Google search engine
Homeಮುಖಪುಟಪಂಜಾಬ್ ಚುನಾವಣೆ - ಮೂವರು ಮಾಜಿ ಮುಖ್ಯಮಂತ್ರಿಗಳಿಂದ ನಾಮಪತ್ರ ಸಲ್ಲಿಕೆ

ಪಂಜಾಬ್ ಚುನಾವಣೆ – ಮೂವರು ಮಾಜಿ ಮುಖ್ಯಮಂತ್ರಿಗಳಿಂದ ನಾಮಪತ್ರ ಸಲ್ಲಿಕೆ

ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಹಾಗೂ ಐದು ಅವಧಿಗೆ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ಅವರು ತಮ್ಮ 96ನೇ ವಯಸ್ಸಿನಲ್ಲಿ ಲಂಬಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಮೂಲಕ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ.

ಪಂಜಾಬ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳು ಮತ್ತು ಮಾಜಿ ಉಪಮುಖ್ಯಮಂತ್ರಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳ ಮುಖಂಡರು ನಾಮಪತ್ರ ಸಲ್ಲಿಸಿದರು.

ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರು ಬರ್ನಾಲಾ ಜಿಲ್ಲೆಯ ಬದೌರ್ ಮೀಸಲಾತಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಚನ್ನಿ ಅವರು ಚಮ್ಕೌರ್ ಸಾಹಿಬ್ ಕ್ಷೇತ್ರದಿಂದ ಕಾಂಗ್ರೆಸ್ ಚಿಹ್ನೆಯ ಮೇಲೆ ಸ್ಪರ್ಧಿಸಿದ್ದಾರೆ.

ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಹಾಗೂ ಐದು ಅವಧಿಗೆ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ಅವರು ತಮ್ಮ 96ನೇ ವಯಸ್ಸಿನಲ್ಲಿ ಲಂಬಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಮೂಲಕ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ.

ಕಾಂಗ್ರೆಸ್ ಪಕ್ಷದಂದಿ ಹೊರಬಂದು ಪಂಜಾಬ್ ಲೋಕ ಕಾಂಗ್ರೆಸ್ ರಾಜಕೀಯ ಸಂಘಟನೆಯನ್ನು ಪ್ರಾರಂಭಿಸಿದ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಮ್ಮ ಸಾಂಪ್ರದಾಯಕ ಪಟಿಯಾಲದಿಂದ ನಾಮಪತ್ರಗಳನ್ನು ಸಲ್ಲಿಸಿದರು.

ಪಾಟಿಯಾಲದಲ್ಲಿ ಮಾಜಿ ಮೇಯರ್ ವಿಷ್ಣು ಶರ್ಮಾ ಕಾಂಗ್ರೆಸ್ ಚಿಹ್ನೆಯಡಿ ಸ್ಪರ್ಧಿಸಿದ್ದಾರೆ.

ಅಮರಿಂದರ್ ಪತ್ನಿ ಮಾಜಿ ಕೇಂದ್ರ ಆಹಾರ ಸಂಸ್ಕರಣಾ ಸಚಿವೆ ಮತ್ತು ಬಟಿಂಡಾ ಸಂಸದೆ ಹರ್ ಸಿಮ್ರತ್ ಕೌರ್ ಬಾದಲ್ ಶಿರೋಮಣಿ ಅಕಾಲಿದಳ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಜಲಾಲಾಬಾದ್ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಬಾದಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಮಹೋನ್ ಸಿಂಗ್ ಫಲಿಯನ್ ವಾಲಾ ಅವರ ವಿರುದ್ಧ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದಿಂದ ಅವರು ಮೂರು ಉಪಚುನಾವಣೆಯಲ್ಲಿ ಸ್ಪರ್ಧಿಸಿ ಯಶಸ್ವಿಯಾಗಿದ್ದಾರೆ.

ನಾಮಪತ್ರ ಸಲ್ಲಿಸಿದ ನಂತರ ಚನ್ನಿ ಬದೌರ್ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ಸೂಚಿಸಿದೆ. ನಾನು ಮಾಲ್ವಾದಲ್ಲಿ ಮಿಷನ್ ಜೊತೆಗೆ ಬಂದಿದ್ದೇನೆ. ಈ ಪ್ರದೇಶ ಅಭಿವೃದ್ಧಿಯಲ್ಲಿ ಹಿಂದುಳಿದಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular