ಸಂಸತ್ ಉಭಯ ಸದನಗಳ ಸದಸ್ಯರನ್ನು ಉದ್ಧೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ ಮಾಡಿರುವ ಭಾಷಣ ದೇಶ ಎದುರಿಸುತ್ತಿರುವ ಸವಾಲುಗಳಿಗೆ ಪೂರಕವಾಗಿಲ್ಲ. ಅಷ್ಟೇ ಅಲ್ಲ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವನ್ನು ಬಳಸಿಲ್ಲ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಯುವಕರು-ಯುವತಿಯರು ಉದ್ಯೋಗದ ಹುಡುಕಾಟದಲ್ಲಿದ್ದಾರೆ. ಆದರೆ ಸರ್ಕಾರ ಒಂದು ಉದ್ಯೋಗವನ್ನೂ ನೀಡಲು ಸಾಧ್ಯವಾಗುತ್ತಿಲ್ಲ ಎಂದರು.
ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ನಂತರ ಶ್ರೀಮಂತರ ಭಾರತ ಮತ್ತು ಬಡವರ ಭಾರತ ಆಗಿ ಪರಿವರ್ತನೆಯಾಗಿದೆ ಎಂದು ರಾಹುಲ್ ಹೇಳಿದರು.
2021ರಲ್ಲಿ ಮೂರು ಕೋಟಿ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಇದು 50 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ದೇಶ ಎದುರಿಸುತ್ತಿದೆ. ಸರ್ಕಾರ ಮೇಡ್ ಇನ್ ಇಂಡಿಯಾ, ಸ್ಪಾರ್ಟ್ ಆಪ್ ಇಂಡಿಯಾದ ಬಗ್ಗೆ ಮಾತನಾಡುತ್ತಿರಿ ಆದರೆ ಯುವಕರಿಗೆ ನಿರೀಕ್ಷಿಸಿ ಉದ್ಯೋಗ ಸಿಕ್ಕಿಲ್ಲ ಎಂದು ಹೇಳಿದರು.
ಅಧ್ಯಕ್ಷೀಯ ಭಾಷಣ ಕಾರ್ಯತಂತ್ರದ ದೃಷ್ಟಿಗೆ ಬದಲಾಗಿ ಅಧಿಕಾರಶಾಹಿ ವಿಚಾರಗಳ ಪಟ್ಟಿಯಿದ್ದಂತೆ ಇದೆ. ಇದು ನಾಯಕತ್ವದ ದೃಷ್ಟಿಕೋನದಿಂದ ಕೂಡಿಲ್ಲ. ಬಜೆಟ್ ಅಧಿಕಾರಿಶಾಹಿ ಗುಂಪು ರಚಿಸಿದ ಭಾಷಣವಾಗಿದೆ ಎಂದು ಟೀಕಿಸಿದರು.
ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಲಾಯಿತು. ಆದರೆ ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಎಷ್ಟು ಉದ್ಯೋಗಗಳನ್ನು ಸೃಷ್ಟಿಸಿದ್ದೀರಿ. ಈ ವರ್ಷದ ಬಜೆಟ್ ಮುಂದಿನ 5 ವರ್ಷಗಳಲ್ಲಿ ಕೇವಲ 60 ಲಕ್ಷ ಉದ್ಯೋಗ ನೀಡುತ್ತದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಅಗತ್ಯವಸ್ತುಗಳ ಬೆಲೆಯನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಉದ್ಯೋಗಗಳನ್ನು ಒದಗಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ರೈತರ ಆದಾಯ ದ್ವಿಗುಣಗೊಳಿಸುವ ಮಾತಿಲ್ಲ. ಹಾಗೆಯೇ ಕೇಂದ್ರ ಸರ್ಕಾರ ರಾಜ್ಯಗಳ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದರು.