ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಗೆ ಸಂಬಂಧಿಸಿದಂತೆ ಯಾವುದೇ ಬಹಿರಂಗ ಚರ್ಚೆ ನಡೆಸಲು ಮುಖ್ಯಮಂತ್ತಿ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ.
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರವೇ ಈ ಕಸರತ್ತು ನಡೆಯುವ ಸಾಧ್ಯತೆ ಇದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿವೆ. ಈ ನಡುವೆಯೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಮಾಡುವಂತೆ ಮುಖ್ಯಮಂತ್ರಿ ಮೇಲೆ ಒತ್ತಡ ಹೆಚ್ಚುತ್ತಿದೆ.
ಅಂತರ್ ರಾಜ್ಯ ನೀರು ವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನು ಭೇಟಿ ಮಾಡಲು ನಿರ್ಧರಿಸಿದ್ದೇನೆ ಎಂದರು.
ದೆಹಲಿ ಪ್ರವಾಸದ ವೇಳ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಗೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಜೊತೆಗೆ ನಡೆಸುವ ಮಾತುಕತೆಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.
2023ರಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಉಲ್ಲೇಖಿಸಿ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ.ರೇಣುಕಾಚಾರರ್ಯ ಸೇರಿ ಹಲವು ಶಾಸಕರು ಐದು ರಾಜ್ಯಗಳ ಚುನಾವಣೆಯ ನಂತರ ಸಂಪುಟದ ಕಸರತ್ತು ನಡೆಯಲಿದೆ. ವಿಳಂಬ ಆದರೆ ಹೊಸ ಸಚಿವರ ಗುರುತು ಹಿಡಿಯುವುದು ಕಷ್ಟವಾಗಲಿದೆ ಎಂದರು.
ಇದೆಲ್ಲದರ ಆಧಾರದ ಮೇಲೆ ನಾವು ನಮ್ಮ ಬಜೆಟ್ ಅನ್ನು ನಿರ್ಧರಿಸುತ್ತೇವೆ. ಫೆಬ್ರವರಿ 7 ರಿಂದ ವಿವಿಧ ಇಲಾಖೆಗಳೊಂದಿಗೆ ಬಜೆಟ್ ಪೂರ್ವ ಸಮಾಲೋನಾ ಸಭೆಗಳನ್ನು ನಡೆಸುತ್ತೇನೆ. ಅವರ ಅಭಿಪ್ರಾಯ ಸಂಗ್ರಹಿಸಿದ ನಂತರ ನಾನು ಬಜೆಟ್ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿಗಳು ಮಾರ್ಚ್ ಮೊದಲ ವಾರದಲ್ಲಿ ತಮ್ಮ ಮೊದಲ ಬಜೆಟ್ ಅನ್ನು ಮಂಡಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.