ದೇಶದ ಹಲವೆಡೆ ಫೆ.5ರಂದು ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ನಡೆಯಲಿರುವ ಗೇಟ್ ಪರೀಕ್ಷೆಯನ್ನು ಮುಂದೂಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ನಿಗದಿತ ಪರೀಕ್ಷೆಗೆ ಕೇವಲ 48 ಗಂಟೆಗಳ ಮೊದಲು ಗೇಟ್ ಪರೀಕ್ಷೆಯನ್ನು ಮುಂದೂಡುವುದ ಅವ್ಯವಸ್ಥೆ ಮತ್ತು ಅನಿಶ್ಚಿತತೆಗೆ ಕಾರಣ ಆಗುತ್ತದೆ. ಅದಕ್ಕಾಗಿ ತಯಾರಿ ನಡೆಸಿರುವ ವಿದ್ಯಾರ್ಥಿಗಳ ವೃತ್ತಿಜೀವನದೊಂದಿಗೆ ಆಟವಾಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಮ್ ನಾಥ್ ಅವರಿದ್ದ ಪೀಟ ಹೇಳಿದೆ.
ಪರೀಕ್ಷೆಯನ್ನು ಯಾವಾಗ ನಡೆಸಬೇಕು ಎಂಬುದು ಶೈಕ್ಷಣಿಕ ನೀತಿಯ ವಿಷಯವಾಗಿದೆ. ನ್ಯಾಯಾಲಯವು ಇದರಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಪೀಠ ಹೇಳಿದೆ.
ಒಂಬತ್ತು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಮತ್ತು ಸುಮಾರು 20,000 ವಿದ್ಯಾರ್ಥಿಗಳು ಪರೀಕ್ಷೆಯನ್ನು ಮುಂದೂಡವಂತೆ ಆನ್ ಲೈನ್ ಅರ್ಜಿಗೆ ಸಹಿ ಹಾಕಿದ್ದಾರೆ ಎಂಬುದನ್ನು ಸುಪ್ರೀಂಕೋರ್ಟ್ ಗಮನಿಸಿದೆ.
ವಿದ್ಯಾರ್ಥಿಗಳು ಅದಕ್ಕೆ ಸಿದ್ದತೆ ನಡೆಸಿದ್ದು ಪರೀಕ್ಷೆಯನ್ನು ಮುಂದೂಡುವ ಮೂಲಕ ನ್ಯಾಯಾಲಯವು ವಿದ್ಯಾರ್ಥಿಗಳ ವೃತ್ತಿಜೀವನದೊಂದಿಗೆ ಆಟವಾಡಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.
200 ಕೇಂದ್ರಗಳಲ್ಲಿ ಒಂಬತ್ತು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಮತ್ತು ಪರೀಕ್ಷೆಯನ್ನು ನಡೆಸಲು ಅಧಿಕಾರಿಗಳು ಯಾವುದೇ ಕೊವಿಡ್ ನ ಮಾರ್ಗದರ್ಶಿಗಳನ್ನು ನೀಡಿಲ್ಲವೆಂದು ಪರೀಕ್ಷೆಯನ್ನು ಮುಂದೂಡುವಂತೆ ಮನವಿ ಮಾಡಿದೆ.
ಗೇಟ್ ಎನ್ನುವುದು ಸ್ನಾತಕೋತ್ತರ ಕಾರ್ಯಕ್ರಮಗಳಲ್ಲಿ ಪ್ರವೇಶಕ್ಕಾಗಿ ಇಂಜಿನಿಯರಿಂಗ್ ಮತ್ತು ವಿಜ್ಞಾನದ ವಿವಿಧ ಪದವಿ ಪೂರ್ವ ವಿಷಯಗಳ ತಿಳುವಳಿಕೆಯನ್ನು ಪರೀಕ್ಷಿಸುವ ಪರೀಕ್ಷೆ ಇದಾಗಿದೆ.