Friday, October 18, 2024
Google search engine
Homeಮುಖಪುಟದೆಹಲಿಯಲ್ಲಿ ಮುಂಜಾನೆಯೇ ಸುರಿದ ಭಾರೀ ಮಳೆ

ದೆಹಲಿಯಲ್ಲಿ ಮುಂಜಾನೆಯೇ ಸುರಿದ ಭಾರೀ ಮಳೆ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ಮುಂದಿನ 2 ಗಂಟೆಗಳಲ್ಲಿ ನೋಯ್ಡಾ, ಇಂದ್ರಪುರಂ ಗುರುಗ್ರಾಮ್ 20-30 ಕಿ.ಮೀ ವೇಗದ ಗಾಳಿಯೊಂದಿಗೆ ಲಘುವಾಗಿ ಮಧ್ಯಮ ತೀವ್ರತೆಯ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದೇಶದ ರಾಜಧಾನಿಯಲ್ಲಿ ಇಂದು ಬೆಳಗ್ಗೆ ಭಾರೀ ಮಳೆ ಸುರಿದಿದ್ದು ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಳೆಯ ಹೊರತಾಗಿಯೂ ದೆಹಲಿಯ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಾಗಿರುವುದು ದಾಖಲಾಗಿದೆ. ವಾಯು ಗುಣಮಟ್ಟ ಸೂಚ್ಯಂಕ 324 ರಷ್ಟು ದಾಖಲಾಗಿದೆ.

ಹವಾಮಾನ ಕಚೇರಿಯ ಮಾಹಿತಿ ಪ್ರಕಾರ ಸಾಮಾನ್ಯವಗಿ ಮೋಡ ಕವಿದ ವಾತಾವರಣ ಇರಲಿದೆ ಮತ್ತು 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುತ್ತದೆ ಎಂದು ಐಎಂಡಿ ತಿಳಿಸಿದೆ.

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ಮುಂದಿನ 2 ಗಂಟೆಗಳಲ್ಲಿ ನೋಯ್ಡಾ, ಇಂದ್ರಪುರಂ ಗುರುಗ್ರಾಮ್ 20-30 ಕಿ.ಮೀ ವೇಗದ ಗಾಳಿಯೊಂದಿಗೆ ಲಘುವಾಗಿ ಮಧ್ಯಮ ತೀವ್ರತೆಯ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿಯಲ್ಲಿ ಕಳೆದ 24 ಗಂಟೆಗಳಲ್ಲಿ 0.6 ಮಿಮೀ ಮಳೆಯಾಗಿರುವುದು ಬೆಳಗ್ಗೆ 8.30ಕ್ಕೆ ದಾಖಲಾಗಿದೆ.

ದೆಹಲಿಯಲ್ಲಿ ಗರಿಷ್ಠ ತಾಪಮಾನ 23.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಸಾಮಾನ್ಯಕ್ಕಿಂತ ಹೆಚ್ಚಾಗಿದೆ ಎಂದು ಐಎಂಡಿ ಹೇಳಿದೆ. ನಗರದಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಾಗಿರುವುದು ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular