Friday, November 22, 2024
Google search engine
Homeಮುಖಪುಟಅರ್ಧಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ಮನೆಗೆ ಅಟ್ಟುವುದು ಅಭಿವೃದ್ಧಿಯೇ - ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಅರ್ಧಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ಮನೆಗೆ ಅಟ್ಟುವುದು ಅಭಿವೃದ್ಧಿಯೇ – ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಅತಿಥಿ ಉಪನ್ಯಾಸಕರ ಆಯ್ಕೆಯಲ್ಲಿ ಶೈಕ್ಷಣಿಕ ಅರ್ಹತೆ, ಹಿರಿತನ ಆಧರಿಸಿ ಅಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಹಾಗಾದರೆ ಇವೆರಡೂ ಅರ್ಹತೆಗಳು ಇಲ್ಲದಿದ್ದವರನ್ನು ಇಷ್ಟು ದಿನ ಅತ್ಯಂತ ಕನಿಷ್ಠ ಸಂಬಳಕ್ಕೆ ದುಡಿಸಿಕೊಂಡಿದ್ದು ಏಕ? ಅದಕ್ಕೆ ಕಾನೂನಿನಲ್ಲಿ ಅವಕಾಶ ಇತ್ತೇ ಎಂದು ಪ್ರಶ್ನಿಸಿದ್ದಾರೆ.

ಏಕಾಏಕಿ ಅರ್ಧಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ಮನೆಗೆ ಅಟ್ಟುವುದು ಯಾವ ಸೀಮೆಯ ಆಡಳಿತ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಭಾರತವು ವಿಶ್ವಗುರು ಆಗಬೇಕು ಎನ್ನುತ್ತೀರಿ. ರಾಷ್ಟ್ರೀಯ ಶಿಕ್ಷಣದ ಮೂಲಕ ದೇಶವನ್ನು ಜ್ಞಾನಕಾಶಿ ಮಾಡುತ್ತೇವೆ ಎಂದು ಹೇಳುತ್ತೀರಿ. ಕರ್ನಾಟಕ ಭಾರತದ ಶೈಕ್ಷಣಿಕ ರಾಜಧಾನಿ ಆಗಬೇಕು ಎನ್ನುತ್ತೀರಿ? ಆದರೆ 9881 ಅತಿಥಿ ಉಪನ್ಯಾಸಕರನ್ನು ಕಿತ್ತೊಗೆಯುವ ಮೂಲಕ ಇದನ್ನು ಸಾಧನೆ ಮಾಡುಲಾಗುತ್ತಿದೆಯೇ ? ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ದೇಶ ಕಟ್ಟುವುದರಲ್ಲಿ ಶಿಕ್ಷಣವೇ ನಿರ್ಣಾಯಕ. ಆ ಶಿಕ್ಷಣ ವ್ಯವಸ್ಥೆಗೆ ಗುರುವೇ ನಾಯಕ. ಆದರೆ ಇಂದು ಕಲಿಸುವ ಗುರುವು ದಿಕ್ಕಿಲ್ಲದೆ ಬೀದಿಯಲ್ಲಿ ನಿಂತಿದ್ದಾನೆ. ಸರ್ಕಾರ ಹೇಳುವುದು ಒಂದು ಮಾಡುವುದು ಇನ್ನೊಂದು ಎಂಬಂತೆ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಉನ್ನತ ಶಿಕ್ಷಣ ವ್ಯವಸ್ಥೆಯ ಕತ್ತು ಹಿಸುಕಿ ವ್ಯವಸ್ಥಿತವಾಗಿ ಖಾಸಗೀ ವಲಯವನ್ನು ಬಲಪಡಿಸುವ,, ಮಕ್ಕಳು-ಪೋಷಕರನ್ನು ಖಾಸಗಿಯವರ ಗುಲಾಮರನ್ನಾಗಿಸುವ ಹುನ್ನಾರ ಇದ ಹಿಂದೆ ಇದೆಯಾ ಎನ್ನುವ ಅನುಮಾನ ಬರುತ್ತಿದೆ ಎಂದು ಹೇಳಿದರು.

ಅತಿಥಿ ಉಪನ್ಯಾಸಕರ ಆಯ್ಕೆಯಲ್ಲಿ ಶೈಕ್ಷಣಿಕ ಅರ್ಹತೆ, ಹಿರಿತನ ಆಧರಿಸಿ ಅಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಹಾಗಾದರೆ ಇವೆರಡೂ ಅರ್ಹತೆಗಳು ಇಲ್ಲದಿದ್ದವರನ್ನು ಇಷ್ಟು ದಿನ ಅತ್ಯಂತ ಕನಿಷ್ಠ ಸಂಬಳಕ್ಕೆ ದುಡಿಸಿಕೊಂಡಿದ್ದು ಏಕ? ಅದಕ್ಕೆ ಕಾನೂನಿನಲ್ಲಿ ಅವಕಾಶ ಇತ್ತೇ ಎಂದು ಪ್ರಶ್ನಿಸಿದ್ದಾರೆ.

ಆರೇ ತಿಂಗಳಲ್ಲಿ ಅಭಿವೃದ್ದಿ ಹರಿಕಾರರಾಗುವುದು ಎಂದರೆ ಇದೇನಾ? ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ ಎಂದರೆ ನಿರುದ್ಯೋಗ ಸೃಷ್ಟಿಯಾ? ಸರ್ಕಾರ ಇರುವುದ ಸಬೂಬು ಹೇಳುವುದಕ್ಕಲ್ಲ. ಕಾರಣ ಹೇಳಿ ಪಲಾಯನ ಮಾಡುವುದಕ್ಕಲ್ಲಾ. ನ್ಯಾಯ ಕೊಡುವ ಬಗ್ಗೆ ಕ್ರಮ ವಹಿಸಬೇಕು. ಕೂಡಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಿಕ್ಕಟ್ಟನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular