Friday, October 18, 2024
Google search engine
Homeಮುಖಪುಟಮಲೆನಾಡು, ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ - ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಮಲೆನಾಡು, ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಪ್ರತ್ಯೇಕ ಪ್ರಣಾಳಿಕೆಗಳನ್ನು ರೂಪಿಸಿದ್ದು ಕೆಲವರಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರಾವಳಿ ತೀರದ ಜನರು ಬಾಂಬೆಗೆ ಹೋಗುತ್ತಿದ್ದಾರೆ. ಮಲೆನಾಡು ಸೇರಿದಂತೆ ಇತರೆಡೆ ಜನರು ಸೌದಿ, ದುಬೈಗೆ ವಲಸೆ ಹೋಗುತ್ತಿದ್ದಾರೆ. ಇಂತಹ ವಲಸೆಯನ್ನು ತಪ್ಪಿಸಲು ಇಲ್ಲಿಯೇ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಒಂದೇ ಒಂದು ಉದ್ಯೋಗ ಸೃಷ್ಟಿಸಲಿಲ್ಲ. ಬದಲಿಗೆ ಲಕ್ಷಾಂತರ ಮಂದಿ ಕೆಲಸ ಕಳೆದುಕೊಳ್ಳುವಂತೆ ಆಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯೋಗ ಸೃಷ್ಟಿಸುವ ಬಗ್ಗೆ ಚಿಂತನೆ ನಡೆಸುತ್ತಿಲ್ಲ. ಕೇವಲ ದೇವರು, ಧರ್ಮ ಎಂಬ ಭಾವನಾತ್ಮಕ ವಿಷಯಗಳನ್ನು ಕೆದಕಿ ಸಮಾಜದಲ್ಲಿ ಶಾಂತಿಭಂಗ ಉಂಟು ಮಾಡಲಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಬಿಜೆಪಿಗೆ ಕಾರ್ಯಕ್ರಮ ರೂಪಿಸುವುದು ಬರುವುದಿಲ್ಲ ಎಂದರು.

ಪಕ್ಷದಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು. ಹಾಗಾಗಿ ಪಕ್ಷ ಪೂಜೆ ಮಾಡಬಹುದು. ನನ್ನ ಬಗ್ಗೆ ಅಭಿಮಾನವಿದ್ದರೆ ಸಾಕು. ನನ್ನನ್ನು ಪೂಜಿಸುವ ಅವಶ್ಯಕತೆ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಮುಖಂಡರು ಬೇರೆ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular