Thursday, January 29, 2026
Google search engine
Homeಮುಖಪುಟಹಿಜಾಬ್ ಗೆ ಅಡ್ಡಿ - ಹೆಣ್ಣು ಮಕ್ಕಳ ಭವಿಷ್ಯಕ್ಕೆ ಕುತ್ತು - ರಾಹುಲ್ ಗಾಂಧಿ

ಹಿಜಾಬ್ ಗೆ ಅಡ್ಡಿ – ಹೆಣ್ಣು ಮಕ್ಕಳ ಭವಿಷ್ಯಕ್ಕೆ ಕುತ್ತು – ರಾಹುಲ್ ಗಾಂಧಿ

ಕರ್ನಾಟಕ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶ ನೀಡದಿರುವುದನ್ನು ಖಂಡಿಸಿ ಮಾತನಾಡಿದ ರಾಹುಲ್ ಗಾಂಧಿ ಸರಸ್ವತಿ ದೇವಿಗೆ ಯಾವುದೇ ಭೇದವಿಲ್ಲ. ಆಕೆ ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ ಎಂದು ಹೇಳಿದ್ದಾರೆ.

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹಿಜಾಬ್ ಅಡ್ಡಬರುತ್ತಿದ್ದು, ಈ ಮೂಲಕ ದೇಶದ ಹೆಣ್ಣು ಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಕರ್ನಾಟಕ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶ ನೀಡದಿರುವುದನ್ನು ಖಂಡಿಸಿ ಮಾತನಾಡಿದ ರಾಹುಲ್ ಗಾಂಧಿ ಸರಸ್ವತಿ ದೇವಿಗೆ ಯಾವುದೇ ಭೇದವಿಲ್ಲ. ಆಕೆ ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಹಿಜಾಬ್ ಅವರ ಶಿಕ್ಷಣ ಹಾದಿಯಲ್ಲಿ ಬರಲು ಬಿಡುವ ಮೂಲಕ ನಾವು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ ಎಂದರು.

ಮಾ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ. ಅವಳು ಭೇದ ಮಾಡುವುದಿಲ್ಲ ಎಂದು ರಾಹುಲ್ ಗಾಂಧಿ ಟ್ವಿಟ್ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವಂತೆ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮೈಸೂರು ನಗರದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಐ ಲವ್ ಹಿಜಾಬ್ ಚಳವಳಿ ಆರಂಭಿಸಿದ್ದಾರೆ.

ಐತಿಹಾಸಿಕ ಬನ್ನಿ ಮಂಟಪದ ಬಳಿ ವಿದ್ಯಾರ್ಥಿಗಳ ಗುಂಪು ಜಮಾಯಿಸಿ ಹಿಜಾಬ್ ಧರಿಸಿ ವಿದ್ಯಾರ್ಥಿಗಳಿಗೆ ಅವಕಾಶ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದರು ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular