Thursday, September 19, 2024
Google search engine
HomeUncategorizedಆರ್.ಜೆ.ಡಿ ಅಧ್ಯಕ್ಷ ಸ್ಥಾನಕ್ಕೆ ತೇಜಸ್ವಿ ಯಾದವ್ - ಕೇವಲ ಊಹಾಪೋಹ ಎಂದ ಲಾಲು

ಆರ್.ಜೆ.ಡಿ ಅಧ್ಯಕ್ಷ ಸ್ಥಾನಕ್ಕೆ ತೇಜಸ್ವಿ ಯಾದವ್ – ಕೇವಲ ಊಹಾಪೋಹ ಎಂದ ಲಾಲು

ತೇಜಸ್ವಿ ಯಾದವ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಲಾಲೂ ಯಾದವ್ ಇಂತಹ ಸುದ್ಧಿಗಳನ್ನು ಹರಡುವವರು ಮೂರ್ಖರು ಎಂದು ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ತಮ್ಮ ಸ್ಥಾನದಿಂದ ಕೆಳಗಿಳಿಯುತ್ತಾರೆ ಮತ್ತು ಪುತ್ರ ತೇಜಸ್ವಿ ಯಾದವ್ ಪಕ್ಷದ ಮುಂದಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬಹುದು ಎಂಬ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.

ತೇಜಸ್ವಿ ಯಾದವ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಲಾಲೂ ಯಾದವ್ ಇಂತಹ ಸುದ್ಧಿಗಳನ್ನು ಹರಡುವವರು ಮೂರ್ಖರು ಎಂದು ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂತಹ ಸುದ್ದಿ ವರದಿಗಳನ್ನು ಮಾಡುವವರು ಮೂರ್ಖರು, ಏನಾಗುತ್ತದೆಯೋ ಅದನ್ನು ನಾವು ತಿಳಿದುಕೊಳ್ಳುತ್ತೇವೆ ಎಂದಿದ್ದಾರೆ.

ಆರ್.ಜೆ.ಡಿ ನಾಯಕ ತೇಜ್ ಪ್ರತಾಪ್ ಯಾದವ್ ಅವರು ತೇಜಸ್ವಿ ಯಾದವ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಮಾತುಕತೆಯನ್ನು ತಳ್ಳಿಹಾಕಿದರು. ಲಾಲೂ ಪ್ರಸಾದ್ ಯಾದವ್ ಪಕ್ಷವನ್ನು ಚನ್ನಾಗಿ ನಡೆಸಿದ್ದರು ಎಂಬ ಚರ್ಚೆಗಳು ನಡೆಯುತ್ತಿವೆ.

ಮುಂಬರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷ ಸಂಘಟನೆಗೆ ಸಂಬಂಧಿಸಿದ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಆದರೆ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಭಾಗವಹಿಸುವುದನ್ನು ಅವರು ಖಚಿತಪಡಿಸಿಲ್ಲ.

ಫೆಬ್ರವರಿ 10ರಂದು ಪಾಟ್ನಾದಲ್ಲಿ ಆರ್.ಜೆ.ಡಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಆರ್.ಜೆ.ಡಿ ನಾಯಕ ತೇಜಸ್ವಿ ಯಾದವ್ ಮತ್ತು ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎಂದು ಲಾಲೂ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular