Friday, October 18, 2024
Google search engine
Homeಮುಖಪುಟಹಿಜಾಬ್ ವಿವಾದ - ದಾವಣಗೆರೆಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

ಹಿಜಾಬ್ ವಿವಾದ – ದಾವಣಗೆರೆಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

ಬಾಗಲಕೋಟೆಯ ರಬಕವಿ, ಬನಹಟ್ಟಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಲಿ ಕಾಲೇಜಿಗೆ ರಜೆ ಘೋಷಿಸಿದೆ.

ಹಿಜಾಬ್ ವಿವಾದ ತಾರಕ್ಕೇರಿದೆ. ಕಳೆದ ಒಂದು ವಾರದಿಂದಲೂ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ದಾವಣಗೆರೆಯಲ್ಲಿ ಕೇಸರಿ ಶಾಲು ಹಾಕಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಲಾಗಿದೆ. ಪರಿಣಾಮ ದಾವಣಗೆರೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಕಲ್ಲು ತೂರಿದ್ದಾರೆ. ಇದನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಕಲ್ಲುತೂರಾಟದಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪರಿಸ್ಥಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಶಿವಮೊಗ್ಗದ ಬಾಪೂಜಿ ನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸುತ್ತಮುತ್ತಲಿನ ಪ್ರದೇಶಗಳಿಂದ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ.

ಹಿಜಾಬ್ ಧರಿಸಿದ್ದ ವಿದ್ಯಾರ್ಥಿಗಳು ಮತ್ತು ಕೇಸರಿ ಶಾಲು ಹಾಕಿಕೊಂಡು ಬಂದ ಇನ್ನೊಂದು ಗುಂಪಿನ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದ ಬಳಿಕ ಕಲ್ಲು ತೂರಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಗಲಕೋಟೆಯ ರಬಕವಿ, ಬನಹಟ್ಟಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಲಿ ಕಾಲೇಜಿಗೆ ರಜೆ ಘೋಷಿಸಿದೆ.

ಉಡುಪಿ ಎಂಜಿಎಂ ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದವರನ್ನು ಕಾಲೇಜು ಆವರಣದಿಂದ ಹೊರಕ್ಕೆ ಕಳುಹಿಸಲಾಯಿತು ಎಂದು ಹೇಳಲಾಗಿದೆ.

ಉಡುಪಿ, ಮಂಡ್ಯ, ಚಿಕ್ಕಮಗಳೂರು, ವಿಜಯಪುರ ಜಿಲ್ಲೆಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು ಪೊಲೀಸರು ಉದ್ವಿಗ್ನತೆಯನ್ನು ಶಾಂತಗೊಳಿಸಲು ಹರಸಾಹಪಡುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular