Friday, November 22, 2024
Google search engine
Homeಮುಖಪುಟಹಿಜಾಬ್-ಕೇಸರಿ ಶಾಲು ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ಲೋಕಕ್ಕೆ ಗೊತ್ತು - ಸಿದ್ದರಾಮಯ್ಯ

ಹಿಜಾಬ್-ಕೇಸರಿ ಶಾಲು ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ಲೋಕಕ್ಕೆ ಗೊತ್ತು – ಸಿದ್ದರಾಮಯ್ಯ

ಎಸ್.ಡಿ.ಪಿ.ಐ ಅಥವಾ ಸಿಎಫ್ಐ ಇದೆಯೋ ವಿದ್ಯಾರ್ಥಿಗಳ ನಡುವೆ ಕೋಮುಸಂಘರ್ಷ ಹುಟ್ಟುಹಾಕುತ್ತಿರುವವರು ಯಾರೇ ಇರಲಿ, ಅಂತಹವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ, ಇನ್ನೂ ಶಂಕೆ-ಅನುಮಾನ ಎಂದು ಕಾಲಹರಣ ಯಾಕೆ ಮಾಡುತ್ತೀರಿ? ಆರೋಪಿಗಳ ಜೊತೆ ಒಳ ಒಪ್ಪಂದ ನಡೆದಿದೆಯೇ ಎಂದು ಪ್ರಶ್ನಿಸಿದ್ದಾರೆ.

ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆ ಎಂಬುದು ರಾಜ್ಯ, ದೇಶ, ವಿದೇಶದ ಜನತೆ ಲೈವ್ ವಿಡಿಯೋದಲ್ಲಿ ನೋಡುತ್ತಿದ್ದಾರೆ. ಹಾಗಿದ್ದರೆ ಅವರ ವಿರುದ್ಧ ಕ್ರಮ ಯಾವಾಗ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮ್ಯ ಪ್ರಶ್ನಿಸಿದ್ದಾರೆ.

ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತೆ ಹಚ್ಚಿ ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ತಿಂಗಳ ಹಿಂದೆಯೇ ಹುಟ್ಟಿಕೊಂಡಿದ್ದ ಹಿಜಾಬ್ -ಕೇಸರಿ ಶಾಲು ವಿವಾದ ಹೊತ್ತಿ ಉರಿಯತೊಡಿಗಿದ ನಂತರ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಇದರ ಹಿಂದೆ ಎಸ್.ಡಿ.ಪಿಐ, ಸಿಎಫ್ಐ ಇರಬಹುದೆಂಬ ಶಂಕೆ ಮೂಡಿದ್ದು ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಇಲ್ಲಿಯವರೆಗೆ ಗೃಹಸಚಿವರು, ಪೊಲೀಸರು, ಇಂಟಲಿಜೆನ್ಸ್ ಏನು ಮಾಡುತ್ತಿದ್ದರು? ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಕಾಂಗ್ರೆಸ್ ಇದೆ ಎನ್ನುತ್ತಿದ್ದಾರೆ. ಇದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ಶಿಕ್ಷಣ ಸಚಿವರಿಗೆ ಸಿ.ಎಫ್.ಐ ಮೇಲೆ ಶಂಕೆಯಂತೆ. ಮೊದಲು ಎಲ್ಲರೂ ಕೂಡಿ ಒಂದು ತೀರ್ಮಾನಕ್ಕೆ ಬರುವುದು ಒಳ್ಳೆಯದು.

ಎಸ್.ಡಿ.ಪಿ.ಐ ಅಥವಾ ಸಿಎಫ್ಐ ಇದೆಯೋ ವಿದ್ಯಾರ್ಥಿಗಳ ನಡುವೆ ಕೋಮುಸಂಘರ್ಷ ಹುಟ್ಟುಹಾಕುತ್ತಿರುವವರು ಯಾರೇ ಇರಲಿ, ಅಂತಹವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ, ಇನ್ನೂ ಶಂಕೆ-ಅನುಮಾನ ಎಂದು ಕಾಲಹರಣ ಯಾಕೆ ಮಾಡುತ್ತೀರಿ? ಆರೋಪಿಗಳ ಜೊತೆ ಒಳ ಒಪ್ಪಂದ ನಡೆದಿದೆಯೇ ಎಂದು ಪ್ರಶ್ನಿಸಿದ್ದಾರೆ.

ಹಿಜಾಬ್ ಧಾರಣೆಯ ಸರಿ-ತಪ್ಪು ಬಗ್ಗೆ ನ್ಯಾಯಾಲಯ ನಿರ್ಧರಿಸಲಿ, ಅಲ್ಲಿಯವರೆಗೆ ಕಾಯೋಣ. ಆದರೆ ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಪ್ರಯತ್ನ, ಶಾಲೆಗೆ ಕಲ್ಲೆಸೆತ, ರಾಷ್ಟ್ರಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಇವೆಲ್ಲವೂ ಅಪರಾಧ ಹೌದಾದರೆ ಮೊದಲು ಈ ಪುಂಡ ವಿದ್ಯಾರ್ಥಿಗಳು ಮೇಲೆ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದ್ದಾರೆ.

ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತಹಚ್ಚಿ ಜನರಿಗೆ ತಿಳಿಸಲಿ. ವಿವಾದದ ಹಿಂದೆ ಯಾರಿದ್ದಾರೆ ಎನ್ನುವುದು ರಾಜ್ಯ, ದೇಶ, ವಿದೇಶದ ಜನತೆ ಲೈವ್ ವಿಡಿಯೋಗಳಲ್ಲಿ ನೋಡಿದ್ದಾರೆ. ಅವರ ವಿರುದ್ಧ ಕ್ರಮ ಯಾವಾಗ ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular