Friday, October 18, 2024
Google search engine
Homeಮುಖಪುಟದಕ್ಷಿಣ ಕನ್ನಡ, ಉಡುಪಿ ಅವಳಿ ಜಿಲ್ಲೆಗಳಲ್ಲಿ ಪೊಲೀಸ್ ಧ್ವಜ ಮೆರವಣಿಗೆ

ದಕ್ಷಿಣ ಕನ್ನಡ, ಉಡುಪಿ ಅವಳಿ ಜಿಲ್ಲೆಗಳಲ್ಲಿ ಪೊಲೀಸ್ ಧ್ವಜ ಮೆರವಣಿಗೆ

ಸಾರ್ವಜನಿಕರ ಸುರಕ್ಷತೆಗಾಗಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯ ಸಂದರ್ಭದಲ್ಲಿ ಇಲ್ಲಿನ ಪಣಂಬೂರಿನಲ್ಲಿ ಸ್ಥಾಪಿತವಾಗಿರುವ ಆರ್.ಎ.ಎಫ್ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ಹಿಬಾಬ್ ವಿವಾದದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಅವಳಿ ಜಿಲ್ಲೆಗಳಲ್ಲಿ ಪೊಲೀಸರು ಧ್ವಜ ಮೆರವಣಿಗೆ ನಡೆಸಿ ಶಾಂತಿ ಕಾಪಾಡುವಂತೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ನಿಭಾಯಿಸುವ ಹಿನ್ನೆಲೆಯಲ್ಲಿ ಹೆಚ್ಚು ತರಬೇತಿ ಪಡೆದ 97ನೇ ಬೆಟಾಲಿಯನ್ ಕ್ರಿಪ್ರ ಕಾರ್ಯಾಚರಣೆ ಪಡೆ 130 ಸಿಬ್ಬಂದಿಗಳೊಂದಿಗೆ ಮೆರವಣೀಗೆಯಲ್ಲಿ ಭಾಗವಹಿಸಿದ್ದರು ಎಂದು ಉಪ ಪೊಲೀಸ್ ಆಯುಕ್ತ ಹರಿರಾಮ್ ಶಂಕರ್ ಹೇಳಿದ್ದಾರೆ.

ಸಾರ್ವಜನಿಕರ ಸುರಕ್ಷತೆಗಾಗಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯ ಸಂದರ್ಭದಲ್ಲಿ ಇಲ್ಲಿನ ಪಣಂಬೂರಿನಲ್ಲಿ ಸ್ಥಾಪಿತವಾಗಿರುವ ಆರ್.ಎ.ಎಫ್ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ಹಿಜಾಬ್ ವಿವಾದದ ಕೇಂದ್ರಬಿಂದುವಾಗಿರುವ ಜಿಲ್ಲೆಯ ಹಲವೆಡೆ ಉಡುಪಿ ಪೊಲೀಸರು ಧ್ವಜ ಮೆರವಣಿಗೆ ನಡೆಸಿ ಜನರಲ್ಲಿ ಅರಿವು ಮೂಡಿಸಿದರು. ಉಡುಪಿ, ಕುಂದಾಪುರ, ಕಾಪು, ಕಾರ್ಕಳ, ಪಡುಬಿದ್ರಿ, ಬ್ರಹ್ಮಾವರ, ಬೈದೂರು ಮತ್ತು ಶಿರ್ವದಲ್ಲಿ ಧ್ವಜ ಮೆರವಣಿಗೆ ನಡೆಸಿದರು.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಮಾತನಾಡಿ, ಸಾರ್ವಜನಿಕರ ಸುರಕ್ಷತೆ ಹಾಗೂ ಜನರಲ್ಲಿ ಆತ್ಮವಿಶ್ವಾಸ ತುಂಬಲು ರೂಟ್‌ಮಾರ್ಚ್ ನಡೆಸಲಾಗುವುದು ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular