Friday, October 18, 2024
Google search engine
Homeಮುಖಪುಟಒಬಿಸಿ ಮೀಸಲಾತಿಗೆ ಸಾಮಾಜಿಕ ಸಮೀಕ್ಷೆಯ ವರದಿಯೇ ಪರಿಹಾರ - ಸಿದ್ದರಾಮಯ್ಯ

ಒಬಿಸಿ ಮೀಸಲಾತಿಗೆ ಸಾಮಾಜಿಕ ಸಮೀಕ್ಷೆಯ ವರದಿಯೇ ಪರಿಹಾರ – ಸಿದ್ದರಾಮಯ್ಯ

ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತ ಬಂದಿದೆ. ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ ಎಂದ ಹೇಳಿದರು.

ಸುಪ್ರೀಂಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಐ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ದೇಶದಲ್ಲಿಯೆ ಮೊದಲ ಬಾರಿ ಮನೆಮನೆಗೆ ತರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗೆ ಇದೆ ಎಂದು ತಿಳಿಸಿದ್ದಾರೆ.

ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯವ್ಯಾಪ್ತಿಯಲ್ಲಿ ರಾಜಕೀಯ ಕ್ಷೇತ್ರ ಸೇರಿಲ್ಲದೆ ಇದ್ದರೂ ಅದು ರಾಜ್ಯದ ಎಲ್ಲಾ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡ ಸಂಗ್ರಹಿಸಿದೆ. ರಾಜ್ಯ ಸರ್ಕಾರ ಈ ಅಂಶಗಳನ್ನು ಗಮನಕ್ಕೆ ತಂದರೆ ಸುಪ್ರೀಂಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು ಎಂದಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರ ಕಾಲವ್ಯಯ ಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿ ಮುಂದಿಟ್ಟುಕೊಂಡು ಸುಪ್ರೀಂಕೋರ್ಟ್ ಮುಂದೆ ತನ್ನ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದರಲ್ಲಿ ಎಲ್ಲಾ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇಋಎ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸು ಅಗತ್ಯ ಇರಬಾರದು ಎಂದರು.

2010ರಲ್ಲಿಯೇ ಸುಪ್ರೀಂಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಬೇಕಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ.

ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತ ಬಂದಿದೆ. ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ ಎಂದ ಹೇಳಿದರು.

ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು. ಸುಪ್ರೀಂಕೋರ್ಟ್ ಆದೇಶವನ್ನು ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ತನ್ನನ್ನು ತೊಡಗಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಜಿಲ್ಲಾ-ತಾಲ್ಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೆ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮೀಸಲಾತಿಯನ್ನ ಇಡೀ ದೇಶಕ್ಕೆ ವಿಸ್ತರಿಸಿದರು. ಆದರೂ ರಾಜಕೀಯ ಮೀಸಲಾತಿ ಇಲ್ಲದೆ ಹಿಂದುಳಿದ ವರ್ಗಗಳು ನ್ಯಾಯಬದ್ದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿದೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular