Saturday, October 19, 2024
Google search engine
Homeಮುಖಪುಟಪ್ರತಿಪಕ್ಷದ ಮುಖಂಡರ ಮೇಲೆ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ - ಸಂಸದ ಸಂಜಯ್ ರಾವುತ್ ಆಕ್ರೋಶ

ಪ್ರತಿಪಕ್ಷದ ಮುಖಂಡರ ಮೇಲೆ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ – ಸಂಸದ ಸಂಜಯ್ ರಾವುತ್ ಆಕ್ರೋಶ

ಮಾರ್ಚ್ 10ರಂದು ಮಹಾರಾಷ್ಟ್ರ ವಿಕಾಸ್ ಅಗಾಡಿ ಸರ್ಕಾರ ಪತನವಾಗಲಿದೆ ಎಂದು ಕೆಲ ಬಿಜೆಪಿ ನಾಯಕರು ಸುಳ್ಳು ಸುದ್ದಿಗಳನ್ನು ಪ್ರಚುರಪಡಿಸಿದ್ದರು. ನಾನ ಸಭಾಪತಿ ವೆಂಕಯ್ಯನಾಯ್ಡು ಅವರಿಗೆ ಪತ್ರ ಬರೆದ ಬಳಿಕ ಈ ರೀತಿಯ ವದಂತಿಗಳನ್ನು ಹರಿಯಬಿಡಲಾಯಿತು ಎಂದು ದೂರಿದರು.

ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಮುಖಂಡರನ್ನು ಹತ್ತಿಕ್ಕಲು ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ನಮ್ಮ ಪಕ್ಷದ ನಾಯಕರಿಗೆ ತೊಂದರೆ ನೀಡಲಾಗುತ್ತಿದೆ. ಅಷ್ಟೇ ಅಲ್ಲ ನಮ್ಮ ನಾಯಕರ ಮೇಲೆ ಒತ್ತಡ ಸೃಷ್ಟಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮಾರ್ಚ್ 10ರಂದು ಮಹಾರಾಷ್ಟ್ರ ವಿಕಾಸ್ ಅಗಾಡಿ ಸರ್ಕಾರ ಪತನವಾಗಲಿದೆ ಎಂದು ಕೆಲ ಬಿಜೆಪಿ ನಾಯಕರು ಸುಳ್ಳು ಸುದ್ದಿಗಳನ್ನು ಪ್ರಚುರಪಡಿಸಿದ್ದರು. ನಾನ ಸಭಾಪತಿ ವೆಂಕಯ್ಯನಾಯ್ಡು ಅವರಿಗೆ ಪತ್ರ ಬರೆದ ಬಳಿಕ ಈ ರೀತಿಯ ವದಂತಿಗಳನ್ನು ಹರಿಯಬಿಡಲಾಯಿತು ಎಂದು ದೂರಿದರು.

ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರವನ್ನು ಬೀಳಿಸುವ ಉದ್ದೇಶದಿಂದ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದರು.

ಮಹಾರಾಷ್ಟ್ರದಲ್ಲಿ ಎಂವಿಎ ಸರ್ಕಾರವನ್ನು ಉರುಳಿಸಲು ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಮಾರ್ಚ್ 10ರೊಗಳಗೆ ಎಂವಿಎ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಇತ್ತೀಚೆಗೆ ಹೇಳಿದ್ದಾರೆ. ಇದು ಸುಳ್ಳ ಎಂದರು.

ಎಂವಿಎ 170 ಚುನಾಯಿತ ಸದಸ್ಯರ ಬಲವನ್ನು ಹೊಂದಿದೆ. ಸಾಕಷ್ಟು ಬಹುಮತವೂ ಇದೆ. ಆದರೂ ಮಹಾರಾಷ್ಟ್ರದಲ್ಲಿ ಚುನಾಯಿತ ಸರ್ಕಾರವನ್ನು ವಿಫಲಗೊಳಿಸಲು ಬಿಜೆಪಿ ಹೇಗೆ ಮತ್ತು ಯಾರ ಸಹಾಯದಿಂದ ಪ್ರಯತ್ನಿಸುತ್ತಿದೆ ಎಂಬುದು ಗೊತ್ತು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular