ಕನ್ನಡ ಸಾಹಿತ್ಯ ಲೋಕದಲ್ಲಿ ತನ್ನದೇ ಛಾಪು ಮೂಡಿಸಿದ್ದ ನಾಡೋಜ ಸಾಹಿತಿ ಡಾ.ಚನ್ನವೀರ ಕಣವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಣವಿ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಬಹುದೊಡ್ಡ ಹಾನಿಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಾರ್ಥಿಸಿದ್ದಾರೆ.
ಓಂ ಶಾಂತಿಃ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಚನ್ನವೀರ ಕಣವಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ ಸಮನ್ವಯ ಕವಿ ಎಂದೇ ಖ್ಯಾತರಾಗಿದ್ದ ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ. ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಸಮನ್ವಯದೊಂದಿಗೆ ಮಾನವಪ್ರೀತಿಯನ್ನು ಎತ್ತಿ ಹಿಡಿಯುವ ಭಾವಗೀತೆಗಳ ಮೂಲಕ ಅಮರತ್ವ ಸಾಧಿಸಿದ ಕವಿ ಚನ್ನವೀರ ಕಣವಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಹಿರಿಯ ಸಾಹಿತಿ, ಬರಹಗಾರ ಡಾ.ರಂಜಾನ್ ದರ್ಗಾ ಸಂತಾಪ ಸೂಚಿಸಿದ್ದಾರೆ.