Friday, October 18, 2024
Google search engine
Homeಮುಖಪುಟಸಮವಸ್ತ್ರ ಬದಲಾವಣೆಗೆ ಒಂದು ವರ್ಷ ಮೊದಲೇ ನೋಟಿಸ್ ನೀಡಬೇಕು - ಪ್ರೊ.ರವಿವರ್ಮಕುಮಾರ್ ವಾದ

ಸಮವಸ್ತ್ರ ಬದಲಾವಣೆಗೆ ಒಂದು ವರ್ಷ ಮೊದಲೇ ನೋಟಿಸ್ ನೀಡಬೇಕು – ಪ್ರೊ.ರವಿವರ್ಮಕುಮಾರ್ ವಾದ

ಬುರ್ಖಾಧಾರಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಒಳಗೆ ಬಿಡದ ಕಾರಣ ಹಲವಾರು ಪದವಿ ಪೂರ್ವ ಕಾಲೇಜುಗಳಲ್ಲಿ ಅವ್ಯವಸ್ಥೇ ಉಂಟಾಗಿದೆ. ಬಿಗಿ ಭದ್ರತೆಯ ನಡುವೆ ಪೊಲೀಸರನ್ನು ನಿಯೋಜಿಸಲಾಗಿದೆ ಮತ್ತು ಸೂಕ್ಷ್ಮ ಸ್ಥಳಗಳಲ್ಲಿರುವ ಪದವಿ ಪೂರ್ವ ಕಾಲೇಜುಗಳ ಬಳಿ ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಮತ್ತು ಹಿಜಾಬ್ ಹಾಕಿಕೊಂಡೇ ತರಗತಿಗೆ ಬಂದಿದ್ದರು ಎಂಬುದನ್ನು ಉಲ್ಲೇಖಿಸಿದರು.

ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತು ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ನ ಪೂರ್ಣ ಪೀಠ ನಾಲ್ಕನೇ ದಿನವೂ ನಡೆಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಮತ್ತು ಪ್ರೊಫೆಸರ್ ರವಿವರ್ಮ ಕುಮಾರ್ ಕರ್ನಾಟಕ ಶಿಕ್ಷಣ ಕಾಯ್ದೆಯನ್ನು ಉಲ್ಲೇಖಿಸಿ ಸಮವಸ್ತ್ರ ಬದಲಾವಣೆಗೆ ಒಂದು ವರ್ಷದ ಮೊದಲೇ ನೋಟಿಸ್ ನೀಡಬೇಕು ಎಂದು ನ್ಯಾಯಾಲಯದ ಗಮನ ಸೆಳೆದರು.

ಶಿಕ್ಷಣ ಸಂಸ್ಥೆಗಳು ಸಮವಸ್ತ್ರಗಳನ್ನು ಬದಲಾಯಿಸಲು ಉದ್ದೇಶಿಸಿದರೆ ಪೋಷಕರಿಗೆ ಒಂದು ವರ್ಷ ಮೊದಲೇ ನೋಟಿಸ್ ನೀಡಬೇಕೆಂದು ನಿಯಮ ತಿಳಿಸುತ್ತದೆ. ಹಿಜಾಬ್ ಅನ್ನು ನಿಷೇಧಿಸದರೆ ಅದಕ್ಕೆ ಒಂದು ವರ್ಷ ಮುಂಚಿತವಾಗಿಯೇ ತಿಳಿಸಬೇಕು ಎಂದು ವಾದ ಮಂಡಿಸಿದರು.

ಬುರ್ಖಾಧಾರಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಒಳಗೆ ಬಿಡದ ಕಾರಣ ಹಲವಾರು ಪದವಿ ಪೂರ್ವ ಕಾಲೇಜುಗಳಲ್ಲಿ ಅವ್ಯವಸ್ಥೇ ಉಂಟಾಗಿದೆ. ಬಿಗಿ ಭದ್ರತೆಯ ನಡುವೆ ಪೊಲೀಸರನ್ನು ನಿಯೋಜಿಸಲಾಗಿದೆ ಮತ್ತು ಸೂಕ್ಷ್ಮ ಸ್ಥಳಗಳಲ್ಲಿರುವ ಪದವಿ ಪೂರ್ವ ಕಾಲೇಜುಗಳ ಬಳಿ ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಮತ್ತು ಹಿಜಾಬ್ ಹಾಕಿಕೊಂಡೇ ತರಗತಿಗೆ ಬಂದಿದ್ದರು ಎಂಬುದನ್ನು ಉಲ್ಲೇಖಿಸಿದರು.

ತಲೆಗೆ ಸ್ಕಾರ್ಫ್ ಧರಿಸುವುದು ನಂಬಿಕೆಯ ಮುಗ್ದ ಆಚರಣೆಯಾಗಿದೆ ಎಂದು ವಾದ ಮಂಡಿಸಿದರು. ಧಾರ್ಮಿಕ ಆಚರಣೆಯ ಪ್ರದರ್ಶನ ಕುರಿತು ಮೂವರು ನ್ಯಾಯಮೂರ್ತಿಗಳ ಪೀಠದ ಮುಂದೆ ವಾದ ಮಂಡಿಸಿದರು.

ಭಾರತದಲ್ಲಿ ಜಾತ್ಯತೀತತೆ ಎಂಬುದು ಟರ್ಕಿ ಸೆಕ್ಯುಲರಿಸಂ ನಂತೆ ಅಲ್ಲ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular