Friday, October 18, 2024
Google search engine
Homeಮುಖಪುಟಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ - ಸಂಪುಟದಿಂದ ಈಶ್ವರಪ್ಪರನ್ನು ವಜಾಗೊಳಿಸಲು ಕಾಂಗ್ರೆಸ್ ಆಗ್ರಹ

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ – ಸಂಪುಟದಿಂದ ಈಶ್ವರಪ್ಪರನ್ನು ವಜಾಗೊಳಿಸಲು ಕಾಂಗ್ರೆಸ್ ಆಗ್ರಹ

ರಾಷ್ಟ್ರಧ್ವಜಕ್ಕೆ ಗೌರವ ನೀಡುವುದು ಮುಖ್ಯ ಸಂಗತಿ. ಆದರೆ ರಾಷ್ಟ್ರಧ್ವಜ ಹಾರಾಡುವ ಕಂಬದಲ್ಲಿ ಕೇಸರರಿ ಧ್ವಜ ಹಾರಿಸಿದರು. ನಂತರ ಮಕ್ಕಳಿಗೆ ಕೇಸರಿ ಶಾಲು ಹಂಚಿದರು. ಅಯೋಧ್ಯೆಯಿಂದ ನಾನೇ ತರಿಸಿಕೊಂಡು ಮಕ್ಕಳಿಗೆ ಹಂಚಿರುವುದಾಗಿ ಸಚಿವರು ಒಪ್ಪಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಮುಖಂಡರ ಮೇಲೆ ಕೇಸು ದಾಖಲಿಸಲಾಗಿದೆ ಎಂದು ತಿಳಿಸಿದರು.

ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸುವ ಶಾಸಕರು, ಸಚಿವರಾದ ನಾವು ಅದೇ ಸಂವಿಧಾನವನ್ನು ಧಿಕ್ಕರಿಸಿ ಕೆಂಪುಕೋಟೆಯ ಮೇಲಿನ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿರುವ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಈಶ್ವರಪ್ಪ ಅವರನ್ನು ಕೂಡಲೇ ವಜಾಗೊಳಿಸಬೇಕಿತ್ತು. ಮುಖ್ಯಮಂತ್ರಿಗಳು ಸಚಿವರಿಂದ ರಾಜಿನಾಮೆ ಪಡೆಯಬೇಕಿತ್ತು. ಮುಖ್ಯಕಾರ್ಯದರ್ಶಿಯಾಗಲಿ, ಪೊಲೀಸ್ ಮಹಾ ನಿರ್ದೇಶಕರಾಗಲಿ ಸ್ವಯಂ ಪ್ರೇರಿತವಾಗಿ ಈಶ್ವರಪ್ಪ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು. ಆದರೆ ಇದ್ಯಾವುದೂ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ಕಾರ್ಯಕರ್ತರು, ನಾಯಕರು ಬಿಜೆಪಿ ಮುಖಂಡರ ವಿರುದ್ದ ಹೇಳಿಕೆ ನೀಡಿದ್ದಕ್ಕೆ ಅವರ ವಿರುದ್ಧವೇ ಸುಮೋಟೋ ಪ್ರಕರಣ ದಾಖಲಿಸಿ ಜೈಲಿಗೆ ಹಾಕಿರುವುದು ನಡೆದಿದೆ. ಅವರನ್ನು ನಾವು ಜೈಲಿನಿಂದ ಬಿಡಿಸಿಕೊಂಡು ಬಂದ ಹಲವು ಉದಾಹರಣೆಗಳು ಇವೆ ಎಂದು ಹೇಳಿದರು.

ಇದೇ ವಿಧಾನಸಭೆಯಲ್ಲಿ ರೈತರ ಹೋರಾಟವನ್ನು ಕಾಂಗ್ರೆಸ್ ಕೃಪಾಪೋಷಿತ ನಾಟಕ ಎಂದು ಮುಖ್ಯಮಂತ್ರಿಗಳು ಹೇಳುವ ಮೂಲಕ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿಕೊಂಡಿದ್ದರು ಎಂದು ನೆನಪಿಸಿದರು.

ರಾಷ್ಟ್ರಧ್ವಜಕ್ಕೆ ಗೌರವ ನೀಡುವುದು ಮುಖ್ಯ ಸಂಗತಿ. ಆದರೆ ರಾಷ್ಟ್ರಧ್ವಜ ಹಾರಾಡುವ ಕಂಬದಲ್ಲಿ ಕೇಸರರಿ ಧ್ವಜ ಹಾರಿಸಿದರು. ನಂತರ ಮಕ್ಕಳಿಗೆ ಕೇಸರಿ ಶಾಲು ಹಂಚಿದರು. ಅಯೋಧ್ಯೆಯಿಂದ ನಾನೇ ತರಿಸಿಕೊಂಡು ಮಕ್ಕಳಿಗೆ ಹಂಚಿರುವುದಾಗಿ ಸಚಿವರು ಒಪ್ಪಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಮುಖಂಡರ ಮೇಲೆ ಕೇಸು ದಾಖಲಿಸಲಾಗಿದೆ ಎಂದು ತಿಳಿಸಿದರು.

ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾವನೆ ಆದ ನಂತರವೂ ಅವರು ಅದನ್ನೇ ಹೇಳುತ್ತಿದ್ದಾರೆ ಎಂದು ಮಾಧ್ಯಮಗಳು ತಿಳಿಸಿವೆ. ಇಷ್ಟಾದರೂ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿಲ್ಲ ಎಂದರೆ ಏನರ್ಥ ಎಂದು ಡಿಕೆಶಿ ಪ್ರಶ್ನಿಸಿದರು.

ಸಚಿವರಿಂದ ದೇಶಕ್ಕೆ ಅಪಮಾನ ಆಗಲು ಅವಕಾಶ ನೀಡುತ್ತಿರುವುದೇಕೆ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಕರ್ತವ್ಯ ಏನು? ನೀವು ನಾವೆಲ್ಲ ಸೇರಿ ಇಂತಹ ದೇಶದ್ರೋಹಿಗಳ ವಿರುದ್ಧ ಹೋರಾಟ ಮಾಡಬೇಕು. ಇದು ನಮ್ಮ ಜವಾಬ್ದಾರಿ ಎಂದರು.

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಈಶ್ವರಪ್ಪ ರಾಜಿನಾಮೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರಿಗೆ ಮನವಿ ಮಾಡಿದರು.

ಸ್ಪೀಕರ್ ಪಕ್ಷಾತೀತರು ಎಂದು ಭಾವಿಸಿದ್ದೆವು. ಆದರೆ ಅವರು ಆ ರೀತಿ ನಡೆದುಕೊಂಡಿಲ್ಲ. ಇದು ಆರ್.ಎಸ್.ಎಸ್, ಬಿಜೆಪಿ ಅಜೆಂಡನಾ? ಸ್ಪೀಕರ್ ಅವರು ಏಕಪಕ್ಷೀಯವಾಗಿ ಒಂದು ಪಕ್ಷದ ಸದಸ್ಯರಂತೆ ನಡೆದುಕೊಂಡಿದ್ದಾರೆ ಎಂದು ಟೀಕಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular