Friday, October 18, 2024
Google search engine
Homeಮುಖಪುಟಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆರೋಪ - ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವರ್ಗಾವಣೆ

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆರೋಪ – ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವರ್ಗಾವಣೆ

ಇದೆಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡ ರಾಜ್ಯ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ ಅವರು ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಾಧಿಕರಣದ ಮುಖ್ಯಸ್ಥರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಜನವರಿ 26ರ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪೋಟೋವನ್ನು ತೆಗೆದಿರಿಸಿ ಅವಮಾನ ಮಾಡಿದ ಆರೋಪ ಹೊತ್ತಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.

ಗಣರಾಜ್ಯೋತ್ಸದ ಆಚರಣೆಯ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪೋಟೋವನ್ನು ಇಡಲಾಗಿತ್ತು. ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಸಮಾರಂಭಕ್ಕೆ ಆಗಮಿಸಿ ಅಂಬೇಡ್ಕರ್ ಪೋಟೋ ತೆಗೆಯುವವರೆಗೂ ಧ್ವಜಾರೋಹಣ ಮಾಡುವುದಿಲ್ಲ ಎಂದು ಪಟ್ಟು ಹಿಡಿದು ಪೋಟೋ ತೆಗೆದ ಮೇಲೆ ಧ್ವಜಾರೋಹಣ ನೆರವೇರಿಸಿದ್ದರು.

ಜಿಲ್ಲಾ ನ್ಯಾಯಾಧೀಶರ ಕ್ರಮವನ್ನು ವಕೀಲರು, ದಲಿತ ಸಂಘಟನೆಗಳ ಮುಖಂಡರು, ಹೋರಾಟಗಾರರು, ಪ್ರಗತಿಪರರು, ಸಾಹಿತಿಗಳು ಖಂಡಿಸಿದ್ದರು. ಜೊತೆಗೆ ಸಾಮಾಜಿಕ ಜಾಲ ತಾಣದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ವಿವಾದದ ನಡುವೆಯೇ ರಾಜ್ಯ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ ಅವರು ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಾಧಿಕರಣದ ಮುಖ್ಯಸ್ಥರನ್ನಾಗಿ ವರ್ಗಾವಣೆ ಮಾಡಲಾಗಿದೆ.

ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ಕೇವಲ ವರ್ಗಾವಣೆ ಮಾಡಿರುವುದು ಕಣ್ಣೊರೆಸುವ ತಂತ್ರವಾಗಿದೆ. ನಾವು ಕೇಳುತ್ತಿರುವುದು ಅವರನ್ನು ವಜಾ ಮಾಡಬೇಕು. ಜವಾಬ್ದಾರಿಯ ಸ್ಥಾನದಲ್ಲಿರುವವರು ಹೀಗೆ ಅನುಚಿತವಾಗಿ ನಡೆದುಕೊಂಡರೆ ಹೇಗೆ ಎಂದು ಹೋರಾಟಗಾರ ಕೊಟ್ಟಶಂಕರ್ ಪ್ರಶ್ನಿಸಿದ್ದಾರೆ.

ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ನ್ಯಾಯಾಧೀಶರನ್ನು ವಜಾ ಮಾಡುವಂತೆ ಒತ್ತಾಯಿಸಿ ದಲಿತ ಸಂಘಟನೆಗಳು, ರೈತ ಸಂಘಟನೆಗಳು, ಪ್ರಗತಿಪರರು ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತಾರೆ ಎನ್ನುವಾಗಲೇ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ.

ಮೈಸೂರಿನಿಂದ ಕಾಲ್ನಡಿಗೆ ಜಾಥ ಬರುತ್ತಿದೆ. ತುಮಕೂರಿನಿಂದಲೂ ಸಾವಿರಾರು ಜನರು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನು ನೋಡಿಕೊಂಡು ವರ್ಗಾವಣೆ ಮಾಡಿದೆ. ಇದು ಕೇವಲ ಕಣ್ಣೊರೆಸುವ ತಂತ್ರವಾಗಿದೆ. ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಇದೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದು ಬೆಂಗಳೂರಿಗೆ ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular