Friday, October 18, 2024
Google search engine
Homeಮುಖಪುಟಹಿಜಾಬ್ ಪ್ರಕರಣ - ನ್ಯಾಯಾಲಯದ ಆದೇಶ ಪಾಲಿಸಲು ಸಿದ್ದರಾಮಯ್ಯ ಸಲಹೆ

ಹಿಜಾಬ್ ಪ್ರಕರಣ – ನ್ಯಾಯಾಲಯದ ಆದೇಶ ಪಾಲಿಸಲು ಸಿದ್ದರಾಮಯ್ಯ ಸಲಹೆ

ಅಲ್ಪಸಂಖ್ಯಾಥ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯೇ ಇರುವುದಿಲ್ಲ. ಶಾಲಾಭಿವೃದ್ಧಿ ಸಮಿತಿ ರೂಪಿಸಿದ ಸಮವಸ್ತ್ರ ನೀತಿಗೆ ಮಾತ್ರ ತೀರ್ಪು ಅನ್ವಯವಾಗುತ್ತದೆ. ಹಾಗಾಗಿ ಸುತ್ತೋಲೆ ಹೊರಡಿಸಿರುವುದು ನ್ಯಾಯಾಲಯದ ಆದೇಶ ಉಲ್ಲಂಘನೆಯಾಗುತ್ತದೆ.

ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆದು ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಸಮಿತಿ ಇರುವ ಕಡೆಗಳಲ್ಲಿ ಸಮಿತಿಯು ಸಮವಸ್ತ್ರ ನೀತಿ ರೂಪಿಸಿದ್ದರೆ ಮಾತ್ರ ಈ ಆದೇಸ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ ಎಂದರು.

ಅಲ್ಪಸಂಖ್ಯಾಥ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯೇ ಇರುವುದಿಲ್ಲ. ಶಾಲಾಭಿವೃದ್ಧಿ ಸಮಿತಿ ರೂಪಿಸಿದ ಸಮವಸ್ತ್ರ ನೀತಿಗೆ ಮಾತ್ರ ತೀರ್ಪು ಅನ್ವಯವಾಗುತ್ತದೆ. ಹಾಗಾಗಿ ಸುತ್ತೋಲೆ ಹೊರಡಿಸಿರುವುದು ನ್ಯಾಯಾಲಯದ ಆದೇಶ ಉಲ್ಲಂಘನೆಯಾಗುತ್ತದೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ನಲ್ಲಿ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಕಮಿಟಿ ಇರುವ ಕಡೆಗಳಲ್ಲಿ ಸಮಿತಿಯು ಸಮವಸ್ತ್ರ ನೀತಿ ರೂಪಿಸಿದ್ದರೆ ಅಲ್ಲಿ ಮಾತ್ರ ಈ ಆದೇಶ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲ ಬರುವ ಎಲ್ಲಾ ಶಾಲೆಗಳಿಗೂ ತೀರ್ಪು ಅನ್ವಯವಾಗುತ್ತದೆ ಸುತ್ತೋಲೆ ಹೊರಡಿಸಿದ್ದು ಇದು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಬಿಜೆಪಿ ಪಕ್ಷದವರೇ ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತ ಮಾಡಲು ಹೊರಟಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು ಎಂದು ಮೋದಿಯವರೇ ಉತ್ತರಿಸಬೇಕು. ಹಿಜಾಬ್ ವಿವಾದದ ಹಿಂದೆ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು ಆರ್.ಎಸ್.ಎಸ್ ಇರಲಿ, ಎಸ್.ಡಿ.ಪಿ.ಐ ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ ಎಂದು ತಿಳಿಸಿದರು.

ಹಿಜಾಬ್ ಏಕಾಏಕಿ ಧರಿಸುತ್ತಿಲ್ಲ: ಡಿ.ಕೆ.ಶಿವಕುಮಾರ್

ಮುಸ್ಲೀಂ ಸಮುದಾಯದ ಹೆಣ್ಣು ಮಕ್ಕಳು ಏಕಾಏಕಿಯಾಗಿ ಹಿಜಾಬ್ ಧರಿಸುತ್ತಿಲ್ಲ. ಹಿಂದಿನಿಂದಲೂ ಹಿಜಾಬ್ ಧರಿಸುತ್ತಿದ್ದರು ಎಂಬುದು ಎಲ್ಲರಿಗೂ ಗೊತ್ತೇ ಇದೆ. ಅನೇಕ ಕ್ರೈಸ್ತ ಶಿಕ್ಷಣ ಸಂಸ್ಥೆಗಳಲ್ಲೂ ಮುಸಲ್ಮಾನ ಹೆಣ್ಣು ಮಕ್ಕಳು ಹಿಜಾಬ್ ಧರಿಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಶಿಕ್ಷಣ ಸಂಸ್ಥೆಗೆ ಸೇರುವಾಗ ಜಾತಿ, ಧರ್ಮ ನೋಡಿಕೊಂಡು ಸೇರಲು ಸಾಧ್ಯವೇ? ಒಂದೊಂದು ಧರ್ಮಕ್ಕೆ ಒಂದೊಂದು ವಿದ್ಯಾಭ್ಯಾಸ ಮಾಡಲು ಸಾಧ್ಯವೇ? ಜನ ತಮ್ಮ ಧರ್ಮಕ್ಕೆ ಅನುಸಾರವಾಗಿ ಮೂಗುತಿ, ಓಲೆ, ಜನಿವಾರ, ಸ್ಕಾರ್ಫ್ ಧರಿಸುತ್ತಾರೆ. ಅದನ್ನು ಬೇಡ ಎಂದು ಹೇಳಲು ಸಾಧ್ಯವೇ? ಹಾಗೆ ಹೇಳಲು ಆಗುತ್ತದೆಯೇ ಎಂದು ಪ್ರಶ್ನಿಸಿದ್ದಾಋಎ.

ಬಿಜೆಪಿ ಸರ್ಕಾರ ಈ ವಿಚಾರದಿಂದ ಕೇವಲ ಶಾಂತಿಯನ್ನು ಮಾತ್ರ ಕದಡುತ್ತಿಲ್ಲ. ಮುಂದೆ ಕರ್ನಾಟಕ ರಾಜ್ಯದಲ್ಲಿ ಯಾರು ಕೂಡ ಬಂಡವಾಳ ಹೂಡುವುದಿಲ್ಲ. ಇದರಿಂದ ನಿರುದ್ಯೋಗ ಸೃಷ್ಟಿಯಾಗುತ್ತದೆ. ಇದರಿಂದ ನಾಗರೀಕ ದಂಗೆ ಆಗುತ್ತವೆ. ಇದಕ್ಕೆಲ್ಲ ನೀವೇ ಅಡಿಪಾಯ ಹಾಕುತ್ತಿದ್ದೀರಿ ಎಂದರು.

ಸರ್ಕಾರ ಮಕ್ಕಳ ಭವಿಷ್ಯದ ಜತೆ ಆಟವಾಡುತ್ತಿದೆ. ಇಂತಹ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಸರ್ಕಾರದ ಜವಾಬ್ದಾರಿ ಅಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್, ಕುವೆಂಪು ಅವರೆಲ್ಲ ಏನು ಹೇಳಿದ್ದಾರೋ ಅದನ್ನೇ ಪಾಲಿಸಿ ಎಂದು ನಾವು ಹೇಳುತ್ತಿದ್ದೇವೆ ಎಂದು ಆಗ್ರಹಿಸಿದರು.

ಸರ್ಕಾರ ಅಭಿವೃದ್ಧಿ ಸಮಿತಿ ಎಲ್ಲಿದೆ ಎಂದು ತೋರಿಸಲಿ. ಈಗ ಅವರು ಹೊಸದಾಗಿ ಈ ಸಮಿತಿ ರಚಿಸಲು ಸಾಧ್ಯವಿಲ್ಲ. ಯಾವುದೇ ಸಂಸ್ಥೆ ಪ್ರಾರಂಭವಾಗಬೇಕಾದರೆ ಆರಂಭದಲ್ಲಿ ಸರ್ಕಾರ ಮಾರ್ಗದರ್ಶನ ನೀಡಿರುತ್ತದೆ. ಆದರೆ ಈಗ ಅದನ್ನು ಮಧ್ಯದಲ್ಲಿ ಮಾಡಲು ಸಾಧ್ಯವಿಲ್ಲ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular