Friday, October 18, 2024
Google search engine
Homeಮುಖಪುಟವಿಧಾನ ಸೌಧ ಚಲೋಕ್ಕೆ ಹರಿದು ಬಂದ ನೀಲಿಸಾಗರ

ವಿಧಾನ ಸೌಧ ಚಲೋಕ್ಕೆ ಹರಿದು ಬಂದ ನೀಲಿಸಾಗರ

ಸಹಸ್ರ, ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ್ದ ದಲಿತ ಸಂಘಟನೆಗಳ ಕಾರ್ಯಕರ್ತರು ನಗರದ ಮುಖ್ಯ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಸುದ್ದಿ ಮುಖ್ಯವಾಹಿನಿ ಮಾಧ್ಯಮಗಳು ಪ್ರಸಾರ ಮಾಡದಿರುವುದಕ್ಕೆ ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.

ಗಣರಾಜ್ಯೋತ್ಸವ ದಿನದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪೋಟೋ ತೆಗೆಸಿ ಅವಮಾನಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ಜಾಥಾ ನಡೆಸಲಾಯಿತು.

ಸಹಸ್ರ, ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ್ದ ದಲಿತ ಸಂಘಟನೆಗಳ ಕಾರ್ಯಕರ್ತರು ನಗರದ ಮುಖ್ಯ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಸುದ್ದಿ ಮುಖ್ಯವಾಹಿನಿ ಮಾಧ್ಯಮಗಳು ಪ್ರಸಾರ ಮಾಡದಿರುವುದಕ್ಕೆ ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಇಷ್ಟೊಂದು ಸಂಖ್ಯೆಯ ಪ್ರತಿಭಟನಾಕಾರರು ಭಾಗಿಯಾಗಿದ್ದು ಇತಿಹಾಸ ಬರೆದಿದೆ.

ಸಂಗೊಳ್ಳಿರಾಯಣ್ಣ ವೃತ್ತದಿಂದ ಪ್ರೀಡಂ ಪಾರ್ಕ್ ವರಗೆ ಮೆರವಣಿಗೆ ಎರಡ್ಮೂರು ಕಿಲೋ ಮೀಟರ್ ವರೆಗೂ ಉದ್ದಕ್ಕೂ ಪ್ರತಿಭಟನಾಕಾರರು ಜೈಭೀಮ್ ಘೋಷಣೆಗಳನ್ನು ಕೂಗುತ್ತ ರಾಯಚೂರು ಜಿಲ್ಲಾ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ದೃಶ್ಯ ಮತ್ತು ಮುದ್ರಣದ ಮುಖ್ಯವಾಹಿನಿ ಮಾಧ್ಯಮಗಳು ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ನಡೆದ ಪ್ರತಿಭಟನೆಯ ಸುದ್ದಿಗೆ ಪ್ರಾಮುಖ್ಯತೆ ಕೊಡಲೇ ಇಲ್ಲ. ಹೀಗಾಗಿ ದಲಿತ ಸಂಘಟನೆಗಳು ಮಾಧ್ಯಮ ಸಂಸ್ಥೆಗಳು ಯಾರ ಪರ ಕೆಲಸ ಮಾಡುತ್ತಿವೆ ಎಂಬುದನ್ನು ವ್ಯಾಪಕ ಟೀಕೆಗೆ ಒಳಪಡಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular