ರಷ್ಯಾ ಮತ್ತು ಉಕ್ರೇನ್ ನಡುವೆ ಸಮರ ತೀವ್ರಗೊಂಡಿದೆ. ಈಗಿನ ಮಾಹಿತಿಯಂತೆ ರಷ್ಯಾ ನಡೆಸಿದ ಶೆಲ್ ದಾಳಿಯಿಂದ 40 ಮಂದಿ ಉಕ್ರೇನಿಯನ್ ಸೈನಿಕರು ಹತ್ಯೆಯಾಗಿದ್ದಾರೆ. ಸುಮಾರು 10 ಮಂದಿ ನಾಗರಿಕರು ಮೃತಪಟ್ಟಿದ್ದಾರೆ.
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆಸ್ನಿಯ ಸಲಹೆಗಾರರ ಹೇಳಿಕೆಯನ್ನು ಉಲ್ಲೇಖಿಸಿ ಖಾಸಗಿ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಇದೇ ವೇಳೆ ರಷ್ಯಾದ ಸುಮಾರು 50 ಆಕ್ರಮಣಕಾರರನ್ನು ಕೊಂದಿರುವುದಾಗಿ ಉಕ್ರೇನ್ ವಿವರಗಳನ್ನು ನೀಡದೆಯೇ ಹೇಳಿಕೊಂಡಿದೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ನಲ್ಲಿ ಮಿಲಿಟರಿ ಕಾರ್ಯಾಚರಣೆ ಘೋಷಿಸಿದಾಗ ಕೆಲವೇ ಕ್ಷಣಗಳಲ್ಲಿ ಸರಣಿ ಸಾವು ನೋವುಗಳಾಗಿವೆ ಎಂದು ಹೇಳಿದ್ದಾರೆ.
ಉಭಯ ದೇಶಗಳ ನಡುವೆ ಬಿಕ್ಕಟ್ಟು ತಲೆದೋರಿದ್ದು ಭಾರತ ಮಧ್ಯ ಪ್ರವೇಶಿಸುವಂತೆ ಉಕ್ರೇನ್ ನ ಭಾರತೀಯ ರಾಯಭಾರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.