ಉಕ್ರೇನ್ ನಲ್ಲಿ ಸಿಲುಕಿರುವ ಕರ್ನಾಟಕ ರಾಜ್ಯದ 346 ಜನರನ್ನು ಕರ್ನಾಟಕ ಸರ್ಕಾರ ಗುರುತಿಸಿದ್ದು ಆ ಜನರ ಸಂಬಂಧಿತ ಮಾಹಿತಿ ಸಂಗ್ರಹಿಸಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವೆಬ್ ಪೋರ್ಟಲ್ ರಚಿಸಿದೆ.
ಮುಖ್ಯಮಂತ್ರಿಗಳ ಕಚೇರಿ, ಮುಖ್ಯ ಕಾರ್ಯದರ್ಶಿ ಮತ್ತು ವಿದೇಶಾಂಗ ಸಚಿವಾಲಯದ ನೋಡೆಲ್ ಅಧಿಕಾರಿಗಳು ಮತ್ತು ಕೈವ್ ನಲ್ಲಿರುವ ರಾಯಭಾರ ಕಚೇರಿಯಲ್ಲಿ ಸಿಲುಕಿರುವ ಪ್ರಕರಣಗಳ ಮಾಹಿತಿ ಪಡೆಯಲಾಗುತ್ತಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಉಕ್ರೇನಿಯನ್ ವಾಯು ಪ್ರದೇಶವನ್ನು ಮುಚ್ಚಿರುವುದರಿಂದ ರಾಜ್ಯ ಪ್ರಜೆಗಳನ್ನು ಸ್ಥಳಾಂತರಿಸಲು ಮಿಷನ್ ಮೋಡ್ ನಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ರಾಜ್ಯದ ಮುಖ್ಯಮಂತ್ರಿ ಬಸವವರಾಜ ಬೊಮ್ಮಾಯಿ ಅವರು ಉಕ್ರೇನ್ ನಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಕ್ರೇನ್ ನಲ್ಲಿ ಭಾರತೀಯರು ಸಿಲುಕಿದ್ದು ಅವರನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ. ರಷ್ಯಾ ಮತ್ತು ಉಕ್ರೇನ್ ನಲ್ಲಿ ಉದ್ಭವಿಸಿರುವ ಬಿಕ್ಕಟ್ಟು ರಣರಂಗವಾಗಿದೆ. ಇದು ವಿಮಾನ ಸೇವೆಗಳಿಗೆ ಹೊಡೆದ ಬಿದ್ದಿದೆ. ಹೀಗಾಗಿ ಭೂ ಮಾರ್ಗದ ಆಯ್ಕೆಗ:ಳ ಮೂಲಕ ಅವರನ್ನು ಸುರಕ್ಷಿತವಾಗಿ ಮರಳಿ ತರುವ ಸಾಧ್ಯತೆಗಳನ್ನು ಅನ್ವೇಷಿಸಲಾಗುತ್ತಿದೆ ಎಂದರು.


