Thursday, September 19, 2024
Google search engine
Homeಮುಖಪುಟಮೇಕೆದಾಟು ಯೋಜನೆಗೆ ಯಶ ಸಿಗಲಿ - ಮುರುಘಾ ಶರಣರು

ಮೇಕೆದಾಟು ಯೋಜನೆಗೆ ಯಶ ಸಿಗಲಿ – ಮುರುಘಾ ಶರಣರು

ರಾಜ್ಯದಲ್ಲಿ ವಿವಿಧ ನೀರಾವರಿ ಹೋರಾಟಗಳು ನಡೆಯುತ್ತಿವೆ. ಇಲ್ಲಿ ಮೇಕೆದಾಟು ಯೋಜನೆ, ಉತ್ತರ ಕರ್ನಾಟಕದಲ್ಲಿ ಮಹದಾಯಿ ಯೋಜನೆಗಾಗಿ ಹೋರಾಟ ನಡೆಯುತ್ತಿವೆ. ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ. ನೀರು ನಮ್ಮ ಹಕ್ಕು. ನಮಗೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂಬ ಅಪೇಕ್ಷೆ, ಒತ್ತಾಯ ಎಲ್ಲವೂ ಇದೆ ಎಂದು ಮುರುಘಾ ಶರಣರು ಹೇಳಿದರು.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಯಶಸ್ವಿಯಾಗಲಿ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಶರಣರು ಹಾರೈಸಿದ್ದಾರೆ.

ಬಿಡದಿ ಮತ್ತು ಕೆಂಗೇರಿ ನಡುವಣ ಕೇತಗಾನಹಳ್ಳಿಯ ಬಳಿ ಬರುತ್ತಿದ್ದ ಪಾದಯಾತ್ರೆಗೆ ಬೆಂಬಲ ನೀಡಿದ ಶ್ರೀಗಳು ಈ ಹೋರಾಟ ಯಶಸ್ವಿ ಆಗಲಿ ಎಂದು ಶುಭ ಹಾರೈಸಿದರು. ಆಶೀರ್ವಾದ ಮಾಡಿದರು.

ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಮುರುಘಾ ಮಠದ ಶ್ರೀಗಳು ಎಲ್ಲ ಧರ್ಮ ಗುರುಗಳ ಜೊತೆಯಲ್ಲಿ ಪಾದಯಾತ್ರೆಗೆ ಆಗಮಿಸಿದ್ದಾರೆ. ಜೊತೆಗೆ ಮಾದಾರ ಚನ್ನಯ್ಯ ಸ್ವಾಮೀಜಿ, ಮಡಿವಾಳ ಶ್ರೀಗಳು, ಗಂಗಾವತಿ ಶ್ರೀಗಳು, ಹಾವೇರಿ ಶ್ರೀಗಳು, ಹರಿಹರ ಶ್ರೀಗಳು ಸೇರಿ ಎಲ್ಲರೂ ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದಿದ್ದಾರೆ. ಕುಡಿಯುವ ನೀರಿಗಾಗಿ ಸ್ವಾಮೀಜಿಗಳು ನಮ್ಮ ಕಾರ್ಯಕರ್ತರು ಹಾಗೂ ನಾಯಕರ ಜತೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ಹೇಳಿದರು.

ಮುರುಘಾ ಶರಣರು ಹೇಳಿದಿಷ್ಟು:

ರಾಜ್ಯದಲ್ಲಿ ವಿವಿಧ ನೀರಾವರಿ ಹೋರಾಟಗಳು ನಡೆಯುತ್ತಿವೆ. ಇಲ್ಲಿ ಮೇಕೆದಾಟು ಯೋಜನೆ, ಉತ್ತರ ಕರ್ನಾಟಕದಲ್ಲಿ ಮಹದಾಯಿ ಯೋಜನೆಗಾಗಿ ಹೋರಾಟ ನಡೆಯುತ್ತಿವೆ. ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ. ನೀರು ನಮ್ಮ ಹಕ್ಕು. ನಮಗೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂಬ ಅಪೇಕ್ಷೆ, ಒತ್ತಾಯ ಎಲ್ಲವೂ ಇದೆ ಎಂದು ಮುರುಘಾ ಶರಣರು ಹೇಳಿದರು.

ಸ್ವಾಮಿಗಳಾಗಿ ನಮ್ಮ ಮೊದಲ ಕರ್ತವ್ಯ ಎಂದರೆ ಸಮಾಜದಲ್ಲಿ ಸಾಮರಸ್ಯ ಹಾಗೂ ಶಾಂತಿ ಕಾಪಾಡುವುದು. ನೊಂದವರಿಗೆ ಸಾಂತ್ವನ ಹೇಳುವುದು, ಸತ್ಕಾರ್ಯಕ್ಕೆ ಬೆಂಬಲ ನೀಡುವುದು. ಹಾಗಾಗಿ ಇಲ್ಲಿ ಸತ್ಕಾರ್ಯ ನಡೆಯುತ್ತಿದೆ. ಅದು ಮೇಕೆದಾಟು ಯೋಜನೆ ಆಗಲೇಬೇಕು ಎಂಬ ಹೋರಾಟ. ಇದಕ್ಕೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದರು.

ಹವಾನಿಯಂತ್ರಿತ ಕೊಠಡಿಯಲ್ಲಿ ನೆಮ್ಮದಿಯಾಗಿ ಕಾಲ ಕಳೆಯಬಹುದಾಗಿದ್ದರೂ ಜನರ ಹಿತಕ್ಕಾಗಿ ಉರಿ ಬಿಸಿಲಿನಲ್ಲಿ ಶಿವಕುಮಾರ್ ಅವರು ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಈ ಹೋರಾಟ ರಾಜ್ಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಅವರ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ. ನಮ್ಮ ನೀರು ನಮ್ಮ ಹಕ್ಕು ಎಂದು ಶರಣರು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular