ಕರ್ನಾಟಕದ ವಿಧಾನಸಭೆಯಲ್ಲಿ ಮಾರ್ಚ್ 4ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23ನೇ ಸಾಲಿನ ಮೊದಲ ಬಜೆಟ್ ಮಂಡಿಸಿದರು. 2 ಲಕ್ಷ 65 ಸಾವಿರ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದು, ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ 7 ಸಾವಿರ ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದಾರೆ.
ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಕೇವಲ 1 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವಂತೆ ಕಾಂಗ್ರೆಸ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿದರೂ ಕೇವಲ 1 ಸಾವಿರ ಕೋಟಿ ರೂಪಾಯಿ ಹಣ ಮೀಸಲಿಡಲಾಗಿದೆ.
ರಾಜ್ಯ 9 ರೈಲ್ವೆ ಹೊಸ ಮಾರ್ಗಗಳ ಅನುಷ್ಠಾನಕ್ಕೆ ಬಜೆಟ್ ನಲ್ಲಿ ಒತ್ತು ನೀಡಿದ್ದು ಕೊಳ್ಳೇಗಾಲ ರಾಯದುರ್ಗ ಸೇರಿದಂತೆ 9 ರೈಲ್ವೆ ಮಾರ್ಗಗಳಿಗೆ ಹಣ ಮೀಸಲಿಡಲಾಗಿದೆ. ಉತ್ತರ ಕರ್ನಾಟಕದ ಧಾರವಾಡ, ಕಿತ್ತೂರು ಮತ್ತು ಬೆಳಗಾವಿ ಅಭಿವೃದ್ಧಿಗೆ 900 ಕೋಟಿ ರೂಪಾಯಿ ಮೀಸಲು ಇಡಲಾಗಿದೆ.
ಮುಖ್ಯಮಂತ್ರಿಗಳು ಹಿಂದುಳಿದ ಪ್ರದೇಶಗಳಲ್ಲಿ 7 ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ ಘೋಷಣೆ ಮಾಡಿದ್ದಾರೆ. ಅದರಲ್ಲಿ ಕೊಪ್ಪಳ, ಬಾಗಲಕೋಟೆ, ಚಾಮರಾಜನಗರ, ಬೀದರ್, ಹಾವೇರಿ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಘೋಷಣೆ ಮಾಡಿದ್ದಾರೆ.
ಪದವಿ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥ ಉಪನ್ಯಾಸಕರ ಗೌರವ ಧನ ಹೆಚ್ಚಿಸುವ ತೀರ್ಮಾನವನ್ನು ಬಜೆಟ್ ನಲ್ಲಿ ಕೈಗೊಳ್ಳಲಾಗಿದೆ.
ರಾಜ್ಯದ ಪ್ರಮುಖ ನಗರಗಳಲ್ಲಿ 438 ನಮ್ಮ ಕ್ಲಿನಿಕ್ ಸ್ಥಾಪನೆಗೆ ಒತ್ತು ನೀಡಲಾಗಿದೆ. ಬೆಂಗಳೂರಿನ ಎಲ್ಲಾ ವಾರ್ಡುಗಳಲ್ಲಿ ನಮ್ಮ ಕ್ಲಿನಿಕ್ ತೆರೆಯಲಾಗುವುದು ಮುಖ್ಯಮಂತ್ರಿಗಳ ಬಜೆಟ್ ಮಂಡನೆಯ ಸಂದರ್ಭದಲ್ಲಿ ಹೇಳಿದರು.
ಮಹಿಳೆಯರ ಸಬಲೀಕರಣಗೊಳಿಸಲು 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಏಳು ತಾಲ್ಲೂಕು ಆಸ್ಪತ್ರೆಗಳನ್ನು 100 ಹಾಸಿಗೆ ಆಸ್ಪತ್ರೆಗಳನ್ನಾಗಿ ಮೇಲುದರ್ಜೆಗೆ ಏರಿಸುವುದು ಬಜೆಟ್ ನಲ್ಲಿ ಸೇರಿದೆ.
ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಜೊತೆಗೆ ದುರ್ಬಲ ವರ್ಗದವರ ಏಳಿಗೆಎ ಒತ್ತು ನೀಡಿದ್ದು ಶಿಕ್ಷಣ, ಉದ್ಯೋಗ, ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದೆ. ಕೃಷಿ ಕೈಗಾರಿಕೆ ಸೇವೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.
ರಾಜ್ಯದ 2.30 ಲಕ್ಷ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2610 ಕೋಟಿ ರೂ ಯೋಜನೆ ಅನುಷ್ಠಾನಕ್ಕೆ ಆದ್ಯತೆ ಮತ್ತು ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಗಳ ಪ್ರಾರಂಭ. ಕಟ್ಟಡ ಕಾರ್ಮಿಕರು ಬಸ್ ನಲ್ಲಿ ಓಡಾಡಲು ರಿಯಾಯಿತಿ ಬಸ್ ಪಾಸ್ ರಾಜ್ಯಾದ್ಯಂತ ವಿಸ್ತರಣೆ.