ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಸಮೀಕ್ಷೆಗಳು ನುಡಿದಿರುವ ಭವಿಷ್ಯ ಬಹುತೇಕ ನಿಜವಾಗಿದೆ. ಉತ್ತರ ಪ್ರದೇಶದಲ್ಲಿ 265 ಸ್ಥಾನಗಳನ್ನು ಪಡೆದು ಬಿಜೆಪಿ ಅಧಿಕಾರ ಹಿಡಿಯಲು ಸನ್ನದ್ದವಾಗಿದೆ.
ಉತ್ತರಾಖಂಡದಲ್ಲಿ ಬಿಜೆಪಿ 48 ಸ್ಥಾನಗಳನ್ನು ಪಡೆದು ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಪಕ್ಷ ಇಲ್ಲಿ ಕೇವಲ 18 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 138 ಸ್ಥಾನಗಳನ್ನು ಪಡೆದುಕೊಂಡು ವಿರೋಧ ಪಕ್ಷಕ್ಕೆ ಸೀಮಿತವಾಗಿದೆ. ಇಲ್ಲಿ ಕಾಂಗ್ರೆಸ್ ಮತ್ತು ಬಿಎಸ್.ಪಿ ಒಂದಂಕಿಯನ್ನು ದಾಟಲು ಸಾಧ್ಯವಾಗಿಲ್ಲ.
ಪಂಜಾಬ್ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಸಮೀಕ್ಷೆಗಳು ನುಡಿದಂತೆಯೇ ಬಹುಮತ ಗಳಿಸಿದೆ. 91 ಸ್ಥಾನಗಳನ್ನು ಗಳಿಸಿ ಅಧಿಕಾರ ಹಿಡಿಯುವತ್ತ ಹೆಜ್ಜೆ ಹಾಕಿದೆ. ಕಾಂಗ್ರೆಸ್ ಕೇವಲ 18 ಸ್ಥಾನಗಳನ್ನು ಗಳಿಸಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಪಂಜಾಬ್ ನಲ್ಲಿ ಆಡಳಿತರೂಢ ಪಕ್ಷವಾಗಿದ್ದರೂ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಮತದಾರರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಮತ್ತೆ ಅಧಿಕಾರ ಹಿಡಿಯುವ ಕಾಂಗ್ರೆಸ್ ಕನಸು ಭಗ್ನವಾಗಿದೆ.