ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ನಂತರ, ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಜನರ ತೀರ್ಪನ್ನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ. ಜನರ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶದ ಮೂಲಕ ಗೆಲುವು ಸಾಧಿಸಿದವರಿಗೆ ಅಭಿನಂದನೆಗಳನ್ನು ಹೇಳುತ್ತೇನೆ. ಜೊತೆಗೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರು ಶ್ರಮ ವಹಿಸಿ ದುಡಿದಿರುವುದಕ್ಕೆ ಕೃತಜ್ಞತೆಗಳನ್ನು ಹೇಳುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದರೂ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವಲ್ಲಿ ಮತ್ತು ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಅಧಿಕಾರ ಕಸಿದುಕೊಳ್ಳಲು ವಿಫಲವಾಯಿತು. ಆಡಳಿತ ವಿರೋಧಿ ಅಂಶದ ಹೊರತಾಗಿಯೂ ಅಧಿಕಾರವನ್ನು ಉಳಿಸಿಕೊಂಡ ಬಿಜೆಪಿಯನ್ನು ಸೋಲಿಸಲು ಪಕ್ಷ ವಿಫಲವಾಗಿದೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಭರ್ಜರಿ ಜಯ ಸಿಗಲಿದೆ ಎಂದು ಟ್ರೆಂಡ್‌ಗಳು ಸೂಚಿಸಿದ ನಂತರ ದೇಶದ ರಾಜಧಾನಿ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಛೇರಿಯಲ್ಲಿ ಸಂಭ್ರಮಾಚರಣೆಗಳು ಕಂಡುಬಂದರೆ, ಕಾಂಗ್ರೆಸ್ ಪ್ರಧಾನ ಕಛೇರಿಯಲ್ಲಿ ಜನರಲ್ಲಿದೆ ಬಿಕೋ ಎನ್ನುತ್ತಿತ್ತು.
ಜನರ ತೀರ್ಪನ್ನು ಗೌರವಿಸುವೆ – ರಾಹುಲ್ ಗಾಂಧಿ
ಜನರ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶದ ಮೂಲಕ ಗೆಲುವು ಸಾಧಿಸಿದವರಿಗೆ ಅಭಿನಂದನೆಗಳನ್ನು ಹೇಳುತ್ತೇನೆ. ಜೊತೆಗೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರು ಶ್ರಮ ವಹಿಸಿ ದುಡಿದಿರುವುದಕ್ಕೆ ಕೃತಜ್ಞತೆಗಳನ್ನು ಹೇಳುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.