Friday, October 18, 2024
Google search engine
Homeಮುಖಪುಟಹಿಜಾಬ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಹಿಜಾಬ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಶಾಲಾ ಸಮವಸ್ತ್ರದ ಪ್ರಿಸ್ಕ್ರಿಪ್ಷನ್ ಸಂವಿಧಾನಿಕವಾಗಿ ಅನುಮತಿಸುವ ಸಮಂಜಸವಾಧ ನಿರ್ಬಂಧವಾಗಿದೆ ಎಂದು ನಾವು ಪರಿಗಣಿಸಿದ್ದೇವೆ. ಇದನ್ನು ವಿದ್ಯಾರ್ತಿಗಳು ವಿರೋಧಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ.ಎಂ.ಖಾಜಿ ಅವರನ್ನೊಳಗೊಂಡ ಪೂರ್ಣಪೀಠ ಹೇಳಿದೆ.

ಉಡುಪಿ ಪದವಿ ಪೂರ್ವ ಕಾಲೇಜುಗಳ ಮುಸ್ಲಿಂ ಬಾಲಕಿಯರು ತರಗತಿಯೊಳಗೆ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸುವ ಹಕ್ಕನ್ನು ಕೋರಿ ಸಲ್ಲಿಸಿದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ನ ಪೂರ್ಣಪೀಠ ಮಂಗಳವಾರ ವಜಾಗೊಳಿಸಿದೆ.

ಮುಸ್ಲೀಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ನಾವು ಪರಿಗಣಿಸಿದ್ದೇವೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಆದೇಶವನ್ನು ಓದಿ ಹೇಳಿದರು.

ಶಾಲಾ ಸಮವಸ್ತ್ರದ ಪ್ರಿಸ್ಕ್ರಿಪ್ಷನ್ ಸಂವಿಧಾನಿಕವಾಗಿ ಅನುಮತಿಸುವ ಸಮಂಜಸವಾಧ ನಿರ್ಬಂಧವಾಗಿದೆ ಎಂದು ನಾವು ಪರಿಗಣಿಸಿದ್ದೇವೆ. ಇದನ್ನು ವಿದ್ಯಾರ್ತಿಗಳು ವಿರೋಧಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ.ಎಂ.ಖಾಜಿ ಅವರನ್ನೊಳಗೊಂಡ ಪೂರ್ಣಪೀಠ ಹೇಳಿದೆ.

ಫೆಬ್ರವರಿ 5, 2022ರ ಸರ್ಕಾರಿ ಅದೇಶವನ್ನು ಹೊರಡಿಸಲು ಸರ್ಕಾರಕ್ಕೆ ಅಧಿಕಾರಿವಿದೆ ಎಂದು ನಾವು ಪರಿಗಣಿಸಿದ್ದೇವೆ ಮತ್ತು ಅದರ ಅಮಾನ್ಯೀಕರಣಕ್ಕಾಗಿ ಯಾವುದೇ ಪ್ರಕರಣವನ್ನು ಮಾಡಲಾಗಿಲ್ಲ ಎಂದು ಪೂರ್ಣ ಪೀಠ ಹೇಳಿದೆ.

ನ್ಯಾಯಾಲಯವು ವಿವಾದದ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಂಡಿದೆ ಮತ್ತು ಉತ್ರಿಸಬೇಕಾದ ನಾಲ್ಕು ಪ್ರಶ್ನೆಗಳನ್ನು ರೂಪಿಸಿದೆ. ಇಡೀ ವಿಷಯದ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಂಡು ನಾವು ಕೆಲವು ಪ್ರಶ್ನೆಗಳನ್ನು ಪ್ರತಿಪಾದಿಸಿದ್ದೇವೆ ಮತ್ತು ಅದಕ್ಕೆ ಅನುಗುಣವಾಗಿ ನಾವು ಉತ್ತರಿಸಿದ್ದೇವೆ ಎಂದು ಪೀಠ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular