Friday, November 22, 2024
Google search engine
Homeಮುಖಪುಟಮಹಾರಾಷ್ಟ್ರದ ಪುಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ತಂದೆ ಮತ್ತು ಸಹೋದರ ಅತ್ಯಾಚಾರ

ಮಹಾರಾಷ್ಟ್ರದ ಪುಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ತಂದೆ ಮತ್ತು ಸಹೋದರ ಅತ್ಯಾಚಾರ

ಪುಣೆ ನಗರದ ಬಂಡಗಾರ್ಡನ್ ಪೊಲೀಸ್ ಠಾಣೆಯಲ್ಲಿ ಈಗ 11 ವರ್ಷದ ಬಾಲಕಿಯ ಸಹೋದ ಮತ್ತು ತಂದೆ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬಾಲಕಿಯ ಅಜ್ಜ (60) ಮತ್ತು ದೂರದ ಚಿಕ್ಕಪ್ಪ (25) ವಿರುದ್ಧ ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಹದಿಹರೆಯದ ಸಹೋದರ ಮತ್ತು ಅವರ ತಂದೆ ಪ್ರತ್ಯೇಕವಾಗಿ ಅತ್ಯಾಚಾರವೆಸಗಿದ್ದರೆ, ಆಕೆಯ ಅಜ್ಜ ಮತ್ತು ದೂರದ ಚಿಕ್ಕಪ್ಪ ಆಕೆಗೆ ಕಿರುಕುಳ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಮತ್ತು ಕಿರುಕುಳಕ್ಕಾಗಿ ಐಪಿಸಿಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದು, ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಪುಣೆ ನಗರದ ಬಂಡಗಾರ್ಡನ್ ಪೊಲೀಸ್ ಠಾಣೆಯಲ್ಲಿ ಈಗ 11 ವರ್ಷದ ಬಾಲಕಿಯ ಸಹೋದ ಮತ್ತು ತಂದೆ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬಾಲಕಿಯ ಅಜ್ಜ (60) ಮತ್ತು ದೂರದ ಚಿಕ್ಕಪ್ಪ (25) ವಿರುದ್ಧ ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಸದಸ್ಯರು ಬಿಹಾರ ಮೂಲದವರಾಗಿದ್ದು ಪ್ರಸ್ತುತ ಪಣೆಯಲ್ಲಿ ವಾಸಿಸುತ್ತಿದ್ದಾರೆ. ಬಾಲಕಿಯು ತನ್ನ ಶಾಲೆಯಲ್ಲಿ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಅಧಿವೇಶನದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಕಳೆದ ಐದು ವರ್ಷಗಳಿಂದ ಆಕೆಯ ಮೇಲೆ ಅತ್ಯಾಚಾರ ನಡೆಯುತ್ತ ಬರುತ್ತಿತ್ತು ಎಂದು ಇನ್ಸ್ ಪೆಕ್ಟರ್ ಅಶ್ವಿನಿ ಸತ್ಪುಟೆ ಹೇಳಿದ್ದಾರೆ.

2017ರಲ್ಲಿ ಬಿಹಾರದಲ್ಲಿ ವಾಸಿಸುತ್ತಿದ್ದಾಗ ತಂದೆ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಆರಂಭಿಸಿದ ಎಂದು ಉಲ್ಲೇಖಿಸಿ ದೂರು ನೀಡಲಾಗಿದೆ.

ಹುಡುಗಿಯ ಹಿರಿಯ ಸಹೋದರ ನವೆಂಬರ್ 2020ರ ಸುಮಾರಿಗೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಆರಂಭಿಸಿದ. ಆಕೆಯ ಅಜ್ಜ ಮತ್ತು ದೂರದ ಚಿಕ್ಕಪ್ಪ ಅವಳನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದರೂ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಘಟನೆಗಳು ಪ್ರತ್ಯೇಕವಾಗಿ ಸಂಭವಿಸಿರುವುದರಿಂದ ಮತ್ತು ಆರೋಪಿಗಳು ಪರಸ್ಪರರ ಕೃತ್ಯಗಳ ಬಗ್ಗೆ ತಿಳಿದಿರದ ಕಾರಣ ಇದು ಸಾಮೂಹಿಕ ಅತ್ಯಾಚಾರದ ಪ್ರಕರಣವಲ್ಲ ಎಂದು ಸತ್ಪುಟೆ ಹೇಳಿದ್ದಾರೆ. ಈ ಪ್ರಕರಣವನ್ನು ಫೋಕ್ಸೋ ಕಾಯಿದೆ ಅಡಿ ತರಲಾಗುತ್ತಿದೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular