ಕೇಂದ್ರ ಸರ್ಕಾರ ಕೂಡಲೇ ಮೇಕೆದಾಟು ಯೋಜನೆಗೆ ಪರಿಸರ ಅನುಮತಿ ಕೊಡಬೇಕು ಮತ್ತು ನಮ್ಮ ವಿಸ್ತೃತ ಯೋಜನ ವರದಿಯನ್ನು ಕಾಔಏರಿ ನೀರಿ ನಿರ್ವಹಣಾ ಪ್ರಾಧಿಕಾರ ಅಂಗೀಕರಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಒತ್ತಾಯಿಸಿದರು.
ತಮಿಳುನಾಡು ವಿಧಾನಸಭೆಯಲ್ಲಿ ಅಲ್ಲಿನ ಸರ್ಕಾರ ಮತ್ತು ಇತರೆ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆ ಜಾರಿ ವಿರೋಧಿಸಿ ಕೈಗೊಂಡಿರುವ ನಿರ್ಣಯ ಸಂಪರ್ಣ ಕಾನೂನು ಬಾಹಿರವಾಗಿದೆ. ಈ ನಿರ್ಣಯವನ್ನು ಖಂಡಿಸುತ್ತೇನೆ ಎಂದು ಹೇಳಿದರು.
ನಾವು ಮೇಕೆದಾಟು ಯೋಜನೆ ಮಾಡುತ್ತಿರುವುದು ಸಂವಿಧಾನಬದ್ದವಾಗಿ ನಮ್ಮ ಪಾಲಿನ ಹೆಚ್ಚುವರಿ ನೀರನ್ನು ಬಳಕೆ ಆಡಿಕೊಳ್ಳಲು. ಬೆಂಗಳೂರು ಮತ್ತು ಸುತ್ತಮುತ್ತಲಿನ ನಗರಗಳಿಗೆ ಕುಡಿಯುವ ನೀರು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾಧಿಸುವ ಯೋಜನೆ ಇದಾಗಿದೆ. ಸುಪ್ರೀಂಕೋರ್ಟ್ ನ ಅಂತಿಮ ವರದಿಯೂ ಬಂದಿದೆ. 177.25 ಟಿಎಂಸಿ ನೀರನ್ನು ಬಿಳಿಗೊಂಡ್ಲುವಿನಿಂದ ತಮಿಳುನಾಡಿಗೆ ಬಿಡಬೇಕು ಎಂದು ತೀರ್ಪು ಹೇಳಿದೆ ಎಂದರು.
ಸುಪ್ರೀಂಕೋರ್ಟ್ ತೀರ್ಪಿನ ನಂತರ ಈವರೆಗೆ ತಮಿಳುನಾಡಿಗೆ ಸುಮಾರ್ 582 ಟಿಎಂಸಿ ನೀರು ಹೆಚ್ಚುವರಿಯಾಗಿ ಹರಿದು ಹೋಗಿದೆ. ಇದು ನಮ್ಮ ಪಾಲಿನ ನೀರು, ನಾವು ಬಳಸಿಕೊಳ್ಳಬೇಕು. ಬೆಂಗಳೂರು ನಗರದ 30ರಷ್ಟು ಜನರಿಗೆ ಇನ್ನೂ ಕೂಡ ಕಾವೇರಿ ನೀರು ಸಿಗುತ್ತಿಲ್ಲ. ಈ ಜನ ಬೋರ್ ವೆಲ್, ಟ್ಯಾಂಕರ್ ನೀರಿನ ಮೇಲೆ ಅವಲಂಬಿಸಿದ್ದಾರೆ. ಅಂತಾರಾಷ್ಟ್ರೀಯ ಖ್ಯಾತಿಯ ನಗರಕ್ಕೆ ಕುಡಿಯುವ ನೀರು ಕೊಡಲು ಆಗ್ತಿಲ್ಲ ಎಂದರೆ ಏನನ್ನಬೇಕು ಎಂದು ಪ್ರಶ್ನಿಸಿದ್ದಾರೆ.
ಮೊನ್ನೆ ಮುಖ್ಯಮಂತ್ರಿಗಳು ಕರೆದ ಸರ್ವಪಕ್ಷ ಸಭೆಯಲ್ಲಿ ನಮಗೆ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ. ತಮಿಳುನಾಡಿನ ನಿರ್ಣಯವನ್ನು ಖಂಡಿಸಿ ನಾವು ಕೂಡ ಖಂಡನಾ ನಿರ್ಣಯವನ್ನು ಮಾಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡೋಣ. ಸರ್ವಪಕ್ಷಗಳ ನಿಯೋಗ ತೆಗೆದುಕೊಂಡು ಹೋಗಿ ಪ್ರಧಾನಿ ಮತ್ತು ಜಲಸಂಪನ್ಮೂಲ ಸಚಿವರ ಮುಂದೆ ವಸ್ತುಸ್ಥಿತಿ ಹೇಳೋಣ.
ಒಕ್ಕೂಟ ವ್ಯವಸ್ಥೆಯಲ್ಲಿ ಒಕ್ಕೂಟ ಧರ್ಮ ಪಾಲನೆ ಮಾಡಬೇಕಾಧದ್ದು ಕೇಂದ್ರ ಸರ್ಕಾರದ ಕರ್ತವ್ಯ. ಕಾವೇರಿ ವಿಷಯದಲ್ಲಿ ರಾಜಕೀಯ ಬದಿಗಿಟ್ಟು ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಕಾವೇಋಇ ನೀರು ನಮ್ಮ ಹಕ್ಕು. ಈ ವಿಷಯದಲ್ಲಿ ರಾಜಿಯಿಲ್ಲ ಎಂದರು.


