Saturday, October 19, 2024
Google search engine
Homeಮುಖಪುಟಮಾರ್ಚ್ 31ಕ್ಕೆ ರಾಹುಲ್ ಗಾಂಧಿ ಸಿದ್ದಗಂಗಾ ಮಠಕ್ಕೆ ಭೇಟಿ

ಮಾರ್ಚ್ 31ಕ್ಕೆ ರಾಹುಲ್ ಗಾಂಧಿ ಸಿದ್ದಗಂಗಾ ಮಠಕ್ಕೆ ಭೇಟಿ

ಮಾರ್ಚ್ 31ರಂದು ಮಧ್ಯಾಹ್ನ 2ಗಂಟೆಗೆ ಬೆಂಗಳೂರು ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಅಲ್ಲಿಂದ ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿ ಅಲ್ಲಿಯೇ ಪ್ರಸಾದ ಸ್ವೀಕರಿಸಲಿದ್ದಾರೆ.

ಸಿದ್ದಗಂಗಾ ಮಠದ ಹಿರಿಯ ಸ್ವಾಮಿಗಳಾದ ಡಾ.ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮದ ನಿಮಿತ್ತ ಮಾರ್ಚ್ 31ರಂದು ಮಧ್ಯಾಹ್ನ 3.30ಕ್ಕ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆಗೆ ಪೂಜೆ ಮಾಡಿ ಗೌರವ ಸಲ್ಲಿಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಂದು ಮಧ್ಯಾಹ್ನ 2ಗಂಟೆಗೆ ಬೆಂಗಳೂರು ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು ಅಲ್ಲಿಂದ ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿ ಅಲ್ಲಿಯೇ ಪ್ರಸಾದ ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ.

ಬಳಿಕ ಬೆಂಗಳೂರಿಗೆ ಬಂದು ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಬಿಬಿಎಂಪಿ ವ್ಯಾಪ್ತಿಯ ನಾಯಕರನ್ನು ಭೇಟಿ ಮಾಡಲಿದ್ದಾರೆ. ಏಪ್ರಿಲ್ 1ರಂದು ಎಲ್ಲಾ ಶಾಸಕರು, ಮಾಜಿ ಶಾಸಕರು, 2018ರ ಚುನಾವಣೆಯ ಪರಾಜಿತ ಅಭ್ಯರ್ಥಿಗಳು, ಸಂಸತ್ ಚುನಾವಣೆ ಪರಾಜಿತ ಅಭ್ಯರ್ಥಿಗಳು, ಮಾಜಿ ಸಂಸದರು, ವಿವಿಧ ಘಟಕಗಳ ಅಧ್ಯಕ್ಷರ ಜೊತೆ ಸಭೆ ಮಾಡಲಿದ್ದಾರೆ.

ಜೂಮ್ ಆಪ್ ಮೂಲಕ ಪಕ್ಷದ ಸದಸ್ಯತ್ವ ನೋಂದಣಿಯಲ್ಲಿ ಸಕ್ರಿಯರಾಗಿರುವವ ಜತೆ ಸಂಪರ್ಕ ಮಾಡಲಾಗುವುದು.

ರಾಜ್ಯದಲ್ಲಿ ಈಗಾಗಲೇ 47 ಲಕ್ಷ ಕಾಂಗ್ರೆಸ್ ಸದಸ್ಯರನ್ನು ನೋಂದಣಿ ಮಾಡಲಾಗಿದ್ದು ಇಡೀ ದೇಶದಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ. ತಾಂತ್ರಿಕ ಕಾರಣದಿಂದ ಪ್ರಾವಿಷನ್ ಆಗಿರುವ ಸದಸ್ಯತ್ವ ಬೇಋಎ ಇದೆ. 31ರಂದು ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹೇಳಿದರು.

ಸದಸ್ಯತ್ವ ನೋಂದಣಿ ಅವಧಿ ವಿಸ್ತರಣೆ ಮಾಡಬೇಕು ಎಂದು ಕೆಲವರು ಮನವಿ ಮಾಡಿದ್ದು ಈ ಬಗ್ಗೆ ದೆಹಲಿ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular