Saturday, November 9, 2024
Google search engine
Homeಮುಖಪುಟಪೆಟ್ರೋಲ್, ಡೀಸೆಲ್ ದರ ಹೆಚ್ಚಳ - 10 ದಿನದಲ್ಲಿ 6.40 ರೂಪಾಯಿ ಏರಿಕೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ – 10 ದಿನದಲ್ಲಿ 6.40 ರೂಪಾಯಿ ಏರಿಕೆ

ಪೆಟ್ರೋಲ್ ಮತ್ತು ಡೀಸೆಲ್ ದರ ಗುರುವಾರವೂ ಹೆಚ್ಚಳವಾಗಿದೆ. ಪ್ರತಿ ಲೀಟರ್ ಇಂಧನಕ್ಕೆ 80 ಪೈಸೆಯಷ್ಟು ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಪ್ರತಿ ಲೀಟರ್ ಗೆ 6.40 ರೂಪಾಯಿ ಹೆಚ್ಚಳ ಕಂಡಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಗುರುವಾರವೂ ಹೆಚ್ಚಳವಾಗಿದೆ. ಪ್ರತಿ ಲೀಟರ್ ಇಂಧನಕ್ಕೆ 80 ಪೈಸೆಯಷ್ಟು ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಪ್ರತಿ ಲೀಟರ್ ಗೆ 6.40 ರೂಪಾಯಿ ಹೆಚ್ಚಳ ಕಂಡಿದೆ.

ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ದೆಹಲಿಯಲ್ಲಿ ಪೆಟ್ರೋಲ್ ದರವು ಈ ಹಿಂದೆ 101.01 ರೂ ಇತ್ತು. ಇದಕ್ಕೆ ಹೋಲಿಸಿದರೆ ಈಗ 101.81 ರೂಗಳಷ್ಟಕ್ಕೆ ಏರಿಕೆಯಾಗಿದೆ. ಡೀಸೆಲ್ ದರದಲ್ಲಿ ಲೀಟರ್ ಗೆ ರೂ.92.27 ರಿಂದ 93.07ಕ್ಕೆ ಹೆಚ್ಚಳವಾಗಿದೆ.

ದೇಶಾದ್ಯಂತ ದರಗಳನ್ನು ಏರಿಕೆ ಮಾಡಲಾಗಿದೆ. ಮತ್ತು ಸ್ಥಳೀಯ ತೆರಿಗೆಯ ಸಂಭವವನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ಇಂಧನ ದರದಲ್ಲಿ ವ್ಯತ್ಯಯ ಕಂಡುಬಂದಿದೆ.

ಮಾರ್ಚ್ 22ರಂದು ದರ ಪರಿಷ್ಕರಣೆಯಲ್ಲಿ ನಾಲ್ಕೂವರೆ ತಿಂಗಳ ಸುದೀರ್ಘ ವಿರಾಮ ಅಂತ್ಯಗೊಂಡ ನಂತರ ಬೆಲೆಯಲ್ಲಿ ಇದು ಒಂಬನೇ ಬಾರಿಗೆ ಮಾಡಿದ ಹೆಚ್ಚಳವಾಗಿದೆ.

ಒಟ್ಟಾರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 6.40 ರೂಪಾಯಿ ಹೆಚ್ಚಳವಾದಂತೆ ಆಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular