Thursday, September 19, 2024
Google search engine
Homeಜಿಲ್ಲೆಡಾ.ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ರಾಹುಲ್ ಗಾಂಧಿ

ಡಾ.ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ರಾಹುಲ್ ಗಾಂಧಿ

ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಸಿದ್ದಗಂಗಾ ಮಠಕ್ಕೆ ಆಗಮಿಸಿ ಡಾ.ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದರು.

ಹಿರಿಯ ಶ್ರೀಗಳ 115ನೇ ಜನ್ಮದಿನೋತ್ಸವ ಅಂಗವಾಗಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಮಾರ್ಚ್ 31ರಂದು ಸಂಜೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಶಿವಕುಮಾರಸ್ವಾಮಿ ಪುತ್ಥಳಿಗೆ ಗೌರವಪೂರ್ವಕವಾಗಿ ನಮಿಸಿದರು.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ನಾಯಕರು ಸ್ವಾಗತಿಸಿದರು. ಅಲ್ಲಿಂದ ಸಿದ್ದಗಂಗಾ ಮಠಕ್ಕೆ ರಸ್ತೆ ಮಾರ್ಗದ ಮೂಲಕ ಆಗಮಿಸಿದರು.

ಕಾರಿನಲ್ಲಿ ರಾಹುಲ್ ಗಾಂಧಿ ಜೊತೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇದ್ದರು.

ಶಿವಕುಮಾರ ಶ್ರೀಗಳ ಗದ್ದುಗೆ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಹಿರಿಯ ಮುಖಂಡ ಕೆ.ಎಚ್.ಮುನಿಯಪ್ಪ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಇದ್ದರು.

ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular