ಶನಿವಾರವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆ ಕಂಡಿದೆ. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಗೆ 80 ಪೈಸೆಗಳಷ್ಟು ಏರಿಕೆಯಾಗಿದೆ.
ಕಳೆದ 12 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ತೀವ್ರ ಏರಿಕೆಯಾಗಿದ್ದು ಪ್ರತಿ ಲೀಟರ್ ಗೆ 7.20 ರೂ ಹೆಚ್ಚಾಗಿದೆ.
ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 102.61 ರೂ ಆಗಿದೆ. ಹಿಂದೆ 101.81 ರೂ ಇತ್ತು.
ಡೀಸೆಲ್ ದರಗಳು ಲೀಟರ್ ಗೆ 93.07 ರಿಂದ 93.87ಕ್ಕೆ ಏರಿಕೆ ಕಂಡಿದೆ. ಇದು ಗ್ರಾಹಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ.
ದೇಶಾದ್ಯಂತ ದರಗಳನ್ನು ಹೆಚ್ಚಿಸಲಾಗಿದೆ.ಸ್ಥಳೀಯ ತೆರಿಗೆಯ ಸಂಭವವನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಗಳಲ್ಲಿ ವ್ಯತ್ಯಯ ಕಂಡು ಬಂದಿದೆ.
ಮಾರ್ಚ್ 22ರಂದು ದರ ಪರಿಷ್ಕರಣೆಯಲ್ಲಿ ನಾಲ್ಕೂವರೆ ತಿಂಗಳ ಸುದೀರ್ಘ ವಿರಾಮ ಅಂತ್ಯಗೊಂಡ ನಂತರ ಬೆಲೆಯಲ್ಲಿ ಇದು 10ನೇ ಹೆಚ್ಚಳವಾಗಿದೆ. ಒಟ್ಟಾರೆ ಪೆಟ್ರೋಲ್ ಬೆಲೆ ಲೀಟರ್ ಗೆ 7.20 ರೂ ಏರಿಕೆಯಾಗಿದೆ.


