Friday, November 22, 2024
Google search engine
Homeಮುಖಪುಟಬೆಲೆ ಏರಿಕೆಯಿಂದ ಇಂಡಿಯಾ ಶೈನಿಂಗ್ ಎಂದು ಲೇವಡಿ ಮಾಡಿದ ಎಚ್.ಡಿ.ಕುಮಾರಸ್ವಾಮಿ

ಬೆಲೆ ಏರಿಕೆಯಿಂದ ಇಂಡಿಯಾ ಶೈನಿಂಗ್ ಎಂದು ಲೇವಡಿ ಮಾಡಿದ ಎಚ್.ಡಿ.ಕುಮಾರಸ್ವಾಮಿ

ಹಿಜಾಬ್ ಕೇಸರಿ ಶಾಲು, ಟಿಪ್ಪು ಪಠ್ಯ, ಮುಸ್ಲಿಂ ವರ್ತಕರಿಗೆ ನಿಷೇಧ, ಹಲಾಲ್ ಕಟ್ ಬಗ್ಗೆ ಅಬ್ಬರಿಸಿ ಬೊಬ್ಬಿರಿಯುವ ಶ್ರೀಮಂತರ ಪಕ್ಷ ಬಿಜೆಪಿಯು ಬೆಲೆ ಏರಿಕೆ ಬಗ್ಗೆ ಮಾತ್ರ ಮೌನವಾಗಿದೆ. ರಾಜ್ಯ ಸರ್ಕಾರವೂ ಮೌನ. ಮುಖ್ಯಮಂತ್ರಿಗಳೂ ಮೌನ. ಮೌನಂ ಶರಣಂ ಗಚ್ಛಾಮಿ, ಮೌನಿ ಪಕ್ಷ, ಮೌನಿ ಸರ್ಕಾರ, ಮೌನಿ ಮುಖ್ಯಮಂತ್ರಿ ಎಂದು ಗೇಲಿ ಮಾಡಿದ್ದಾರೆ.

ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ. 13 ದಿನಗಳಲ್ಲಿ 8 ರೂ ಜಿಗಿತ. ಇದಪ್ಪಾ ಬಹುಜನ ಹಿತಾಯ, ಬಹುಜನ ಸುಖಾಯ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

13 ದಿನದಿಂದ ಬೆಲೆ ಏರಿಕೆ ನಿರಂತರವಾಗಿದೆ. ಎರಡೂ ತೈಲಗಳ ಬೆಲೆ 8 ರೂ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ ಆಗಿದೆ. ಡೀಸೆಲ್ ಬೆಲೆ ಲೀಟರಿಗೆ 92.83 ರೂಗೆ ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿ ಎಂದು ವ್ಯಂಗ್ಯ ಮಾಡಿದ್ದಾರೆ.

2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು.

ಹಾದಿ ಬೀದಿಯಲ್ಲಿ ಖಾಲಿ ಸಿಲಿಂಡರ್ ಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಾಗಿದ್ದಾರೆ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ? ಬನ್ನಿ ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಎಂದು ಹೇಳಿದ್ದಾರೆ.

ಸೀಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ. ಕೆಲವರ ಜೇಬು ತುಂಬುತ್ತಿದೆ. ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಜಗತ್ತಿನ ಟಾಪ್ ಶ್ರೀಮಂತರಾಗುತ್ತಿದ್ದಾರೆ ಎಂದು ಕಾಲು ಎಳೆದಿದ್ದಾರೆ.

ಹಿಜಾಬ್ ಕೇಸರಿ ಶಾಲು, ಟಿಪ್ಪು ಪಠ್ಯ, ಮುಸ್ಲಿಂ ವರ್ತಕರಿಗೆ ನಿಷೇಧ, ಹಲಾಲ್ ಕಟ್ ಬಗ್ಗೆ ಅಬ್ಬರಿಸಿ ಬೊಬ್ಬಿರಿಯುವ ಶ್ರೀಮಂತರ ಪಕ್ಷ ಬಿಜೆಪಿಯು ಬೆಲೆ ಏರಿಕೆ ಬಗ್ಗೆ ಮಾತ್ರ ಮೌನವಾಗಿದೆ. ರಾಜ್ಯ ಸರ್ಕಾರವೂ ಮೌನ. ಮುಖ್ಯಮಂತ್ರಿಗಳೂ ಮೌನ. ಮೌನಂ ಶರಣಂ ಗಚ್ಛಾಮಿ, ಮೌನಿ ಪಕ್ಷ, ಮೌನಿ ಸರ್ಕಾರ, ಮೌನಿ ಮುಖ್ಯಮಂತ್ರಿ ಎಂದು ಗೇಲಿ ಮಾಡಿದ್ದಾರೆ.

ಡಾ.ಮನಮೋಹನ್ ಸಿಂಗ್ ಅವರನ್ನು ಮೌನಿ ಪ್ರಧಾನಿ ಎಂದ ಇವರ ಅಬ್ಬರ ಎಲ್ಲಿ ಉಡುಗಿ ಹೋಗಿದೆ. ದನಿಯೆತ್ತಿ ಬೆಲೆ ಏರಿಕೆ ವಿರುದ್ಧ. ಇದು ನನ್ನ ಆಗ್ರಹ. ಬೆಲೆ ಏರಿಎಕ ಬಗ್ಗೆ ಜನರ ಆಕ್ರೋಶ ಎಲ್ಲಿ ಆಸ್ಪೋಟಗೊಮಡು ಬಿಜೆಪಿ ಬುಡಕ್ಕೆಲ್ಲಿ ಬೆಂಕಿ ಬೀಳುತ್ತದೋ ಎಂಬ ಭಯದಿಂದ ಆ ಮುಗ್ದ ಜನರ ಮನಸ್ಸನ್ನು ಸೂಕ್ಷ್ಮ ವಿಷಯಗಳ ಕಡೆ ಹೊರಳುವಂತೆ ಮಾಡಲಾಗಿದೆ ಎಂದು ಟೀಕಿಸಿದರು.

150 ಸೀಟಿನ ರೋಡ್ ಮ್ಯಾಪ್ ಎಲ್ಲಿ ಮಣ್ಣುಪಾಲಾಗುತ್ತದೋ ಎಂದು ಹಿಂದುತ್ವದ ವಿನಾಶಕ್ಕೆ ಹಿಂಸಾಚಾರದ ಶಂಖ ಊದಲಾಗಿದೆ. ಘನವೇತ್ತ ಮಾಜಿ ಸಿ.ಎಂ, ಮಾಜಿ ಕೇಂದ್ರಮಂತ್ರಿಗಳೂ ಡಿ.ವಿ.ಸದಾನಂದಗೌಡರು, ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಕಾರಣ ಎಂದಿದ್ದಾರೆ. 8 ವರ್ಷವಾದರೂ ಯುಪಿಎ ಮಾಡಿದ ತಪ್ಪು ಸರಿ ಮಾಡಲಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.

ಅಡುಗೆ ಮನೆಗಳಲ್ಲಿ ತಾಯಂದಿರು, ಬೆಲೆ ಏರಿಕೆ ಬೆಂಕಿಯಲ್ಲಿ ಬೇಯುತ್ತಿದ್ದರೆ, ನಿಮಗೆ ರಾಜಕೀಯ ಮುಖ್ಯವಾಗಿ. ನಾಚಿಕೆಯಾಗಬೇಕು. ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ. ಬಡವರ ರಕ್ತಹೀರಿ ಸಿರವಂತರ ಖಜಾನೆ ಭರ್ತಿ ಮಾಡುವ ಬಲ್ಲಿದ ಜನರ ಪಕ್ಷ. ಬೆಲೆ ಶೂಲದಿಂದ ಬಡಜನರನ್ನು ಬರ್ಬಾದ್ ಮಾಡುತ್ತಿರುವ ಪಕ್ಷ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular