ಮಹಾರಾಷ್ಟ್ರ, ಬಿಹಾರ, ಪಶ್ಚಿಮಬಂಗಾಳ ಮತ್ತು ಛತ್ತೀಸ್ ಘಡ ರಾಜ್ಯಗಳಲ್ಲಿ ನಾಲ್ಕು ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಐದು ಕ್ಷೇತ್ರಗಳಲ್ಲಿಯೂ ಬಿಜೆಪಿ ಸೋಲು ಕಂಡಿದೆ.
ಮಹಾರಾಷ್ಟ್ರದ ಕೊಲ್ಲಾಪುರ ಉತ್ತರ ಮತ್ತು ಛತ್ತೀಸ್ ಗಡದ ಖಯರಾಘರ್ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಬಿಹಾರದ ಬೋಛಾಹ ವಿಧಾನಸಭಾ ಕ್ಷೇತ್ರದಲ್ಲಿ ಆರ್.ಜೆಡಿ ಅಭ್ಯರ್ಥಿ ಜಯಗಳಿಸಿದ್ದಾರೆ.
ಪಶ್ವಿಮಬಂಗಾಳದ ಅಸಾನ್ಸೋಲ್ ಲೋಕಸಭಾ ಕ್ಷೇತ್ರ ಮತ್ತು ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.
ಬಿಹಾರದ ಬೋಛಾಹ ವಿಧಾನಸಭಾ ಕ್ಷೇತ್ರವು ಎಸ್.ಸಿ ಮೀಸಲು ಕ್ಷೇತ್ರವಾಗಿದ್ದು ವಿಕಾಸಶೀಲ ಇನ್ಸಾನ್ ಪಾರ್ಟಿಯ ಶಾಸಕ ಮುಖೇಶ್ ಸಹಾನಿ ಮೃತಪಟ್ಟಿದ್ದರು. ಈ ಕಾರಣಕ್ಕಾಗಿ ನಡೆದ ಚುನಾವಣೆಯಲ್ಲಿ ಆರ್.ಜೆ.ಡಿಯ ಅಮರ್ ಕುಮಾರ್ ಪಾಸ್ವಾನ್ ಆಯ್ಕೆಯಾಗಿದ್ದಾರೆ.
ಪಶ್ಚಿಮ ಬಂಗಾಳದ ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಬಬುಲ್ ಸುಪ್ರಿಯೋ ಗೆಲುವು ಸಾಧಿಸಿದ್ದಾರೆ.ಅಸಾನ್ಸೋಲ್ ಲೋಕಸಭಾ ಕ್ಷೇತ್ರದಲ್ಲಿ ಟಿಎಂಸಿಯ ಮುಖಂಡ ಶತ್ರುಘ್ನ ಸಿನ್ಹ ಜಯ ಗಳಿಸಿದ್ದಾರೆ.
ಮಹಾರಾಷ್ಟ್ರದ ಕೊಲ್ಲಾಪುರ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಜಯಶ್ರೀ ಜಾಧವ್ 18 ಸಾವಿರ ಮತಗಳಿಂದ ಆಯ್ಕೆಯಾಗಿದ್ದಾರೆ. ಛತ್ತೀಸ್ ಘಡದ ಖೈರಾಘರ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಶೋಧ ನಿಲಂಬರ್ ವರ್ಮಾ 20 ಸಾವಿರ ಮತಗಳಿಂದ ಜಯ ಸಾಧಿಸಿದ್ದಾರೆ.