Friday, November 22, 2024
Google search engine
Homeಮುಖಪುಟಹುಬ್ಬಳ್ಳಿ ಘಟನೆಗಳು ಕೆಟ್ಟ ಪ್ರವೃತ್ತಿಯ ಸಂಕೇತ - ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಹುಬ್ಬಳ್ಳಿ ಘಟನೆಗಳು ಕೆಟ್ಟ ಪ್ರವೃತ್ತಿಯ ಸಂಕೇತ – ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಕಳೆದ ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ತೀವ್ರ ಆಘಾತ ಉಂಟುಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಟಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುಎ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್ ರಾದ್ದಾಂತಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್ ಸುರಿಯದೇ ಸಹನೆ ಮೆರೆಯಬೇಕಿತ್ತು. ಪೊಲೀಸರ ಮೇಲೆ ದಾಳಿ, ರಾಣೆ ಮತ್ತು ಆಸ್ಪತ್ರೆ ಮೇಲೆ ಕಲ್ಲುಗಳನ್ನು ಎಸೆದು ಹಾನಿ ಮಾಡಬಾರದಿತ್ತು ಎಂದು ಹೇಳಿದ್ದಾರೆ.

ಕಿಡಿಗೇಡಿ ಯುವಕನ ಬಂಧನವಾಗಿದೆ. ಕಾನೂನು ಅವನನ್ನು ನೋಡಿಕೊಳ್ಳುತ್ತದೆ. ಇನ್ನೊಂದು ಸಮುದಾಯವು ಕಾನೂನನ್ನು ಕೈಗೆತ್ತಿಕೊಳ್ಳದೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮುದಳ್ಳುರಿಯಲ್ಲಿ ಬೇಯುತ್ತಿದೆ. ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ ಎಂದಿದ್ದಾರೆ.

ಅನುಭವದಿಂದ ಪಾಠ ಕಲಿಯುತ್ತಿಲ್ಲ ಎನ್ನುವುದಕ್ಕೆ ಹುಬ್ಬಳ್ಳಿ ಘಟನೆ ಒಂದು ನಿದರ್ಶನ. ಹಿಂದೆ ಬೆಂಗಳೂರಿನಲ್ಲಿ ಕಿಡಿಗೇಡಿ ಯುವಕನೊಬ್ಬ ಒಂದು ಧರ್ಮಗುರುವಿನ ಬಗ್ಗೆ ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದ ಪರಿಣಾಮ ಶಾಸಕರೊಬ್ಬರ ಮನೆ, ಡಿಜೆ ಹಳ್ಳಿ ಪೊಲೀಸ್ ಠಾಣೆಯೇ ಬಿಂಕಿಗೆ ಆಹುತಿ ಆಗಿತ್ತು ಎಂದು ತಿಳಿಸಿದ್ದಾರೆ

ಹುಬ್ಬಳ್ಳಿ ಇನ್ನೊಂದು ಡಿಜೆ ಹಳ್ಳಿ ಆಗುವುದನ್ನು ಪರಿಣಾಮಕಾರಿಯಾಗಿ ತಡೆದ ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್ ಆಯುಕ್ತರು ಹಾಗು ಇಡೀ ಪೊಲೀಸ್ ಸಿಬ್ಬಂದಿಗೆ ಅಭಿನಂತನೆಗಳು ಸಲ್ಲುತ್ತವೆ. ಸಕಾಲಕ್ಕೆ ಅವರು ಎಚ್ಚೆತ್ತ ಪರಿಣಾಮ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಿದರು.

ಕುಂದಾಪುರದಿಂದ ಹಿಡಿದು ಹುಬ್ಬಳ್ಳಿವರೆಗೆ ನಡೆದ ಎಲ್ಲಾ ಘಟನೆಗಳನ್ನು ನೋಡಿದರೆ ಎದ್ದು ಕಾಣುವುದು ರಾಜ್ಯ ಸರ್ಕಾರದ ಘೋರ ವೈಫಲ್ಯ. ಬಿಗಿಕ್ರಮ ಕೈಗಳ್ಳುವ ಬದಲಿಗೆ ಸರ್ಕಾರ ಬೀಡುಬೀಸಾಗಿ ವರ್ತಿಸಿದ್ದೇ ಇಂಥ ಘಟನೆಗಳಿಗೆ ಕಾರಣ. ಹುಬ್ಬಳ್ಳಿ ಘಟನೆಯನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ವಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. ಕೆಲ ಕಿಡಿಗೇಡಿಗಳಿಗೆ ಕಿಚ್ಚೆಮದರೆ ಬಲು ಇಷ್ಟವೆಂಬಂತೆ ಇದೆ. ಅವರಿಗೆ ಸೋಶಿಯಲ್ ಮೀಡಿಯಾ ಹಿಂಸೆ ಹರಡುವ ಟೂಲ್ ಕಿಟ್ ಆಗಿಬಿಟ್ಟಿದೆ. ಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ ಎಂದು ಸಲಹೆ ನೀಡಿದ್ದಾರೆ.

ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ ಬ್ರಿಟೀಷ್ ನೀತಿಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ ಎಂದಿದ್ದಾರೆ.

ನಿರುದ್ಯೋಗ, ಬೆಲೆ ಏರಿಕೆ ಹಣದುಬ್ಬರದಿಂದ ಬರ್ಬರವಾದ ಜನರ ಬದುಕಿನ ಬಗ್ಗೆ ಸೋಶಿಯಲ್ ಮೀಡಿಯಾ ಶೂರರ ಮೌನ ಅಪಾಯಕಾರಿ. ಅಲ್ಲದೆ ರಾಷ್ಟ್ರೀಯ ಪಕ್ಷಗಳ ಕಾಣದ ಕೈಚಳಕ, ಮೌನ ಕುಮ್ಮಕ್ಕು ವಿನಾಶಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular