Friday, September 20, 2024
Google search engine
Homeಮುಖಪುಟಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು - ಸುಪ್ರೀಕೋರ್ಟ್ ತೀರ್ಪು

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು – ಸುಪ್ರೀಕೋರ್ಟ್ ತೀರ್ಪು

ದೇಶಾದ್ಯಂತ ಅಂಗನವಾಡಿಗಳಲ್ಲಿ ದುಡಿಯುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರಿದ್ದಾರೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ತೀರ್ಪನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ವಿವಿಧ ಕಲ್ಯಾಣ ಯೋಜನೆಗಳಲ್ಲಿ ಬೆನ್ನೆಲುಬಾಗಿ ಕೆಲಸ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕಡಿಮೆ ಗೌರವಧನ ನೀಡಲಾಗುತ್ತಿದೆ ಎಂಬುದನ್ನು ಗಮನಿಸಬೇಕು ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಅಭಯ್ ಓಕಾ ಮತ್ತು ಅಜಯ್ ರಸ್ತೋಗಿ ಅವರಿದ್ದ ವಿಭಾಗೀಯ ಪೀಠವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮನವಿಯನ್ನು ತಿರಸ್ಕರಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಟಿಗೆ ಅರ್ಹರಲ್ಲ ಎಂದು ವಾದಿಸಿದ್ದವು. ಹೀಗಾಗಿ ಸುಪ್ರೀಂಕೋರ್ಟ್ ತೀರ್ಪು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ದನಿಯಿಲ್ಲದವರಿಗೆ ಅವರ ಕೆಲಸದ ಸ್ವರೂಪಕ್ಕೆ ಅನುಗುಣವಾಗಿ ಉತ್ತಮ ಸೇವಾ ಪರಿಸ್ಥಿತಿಗಳನ್ನು ಒದಗಿಸುವ ವಿಧಾನಗಳನ್ನು ಕಂಡುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು ಪೂರ್ಣಾವಧಿ ನೌಕರರಲ್ಲ ಎಂಬ ಸರ್ಕಾರಗಳ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular