ಮಧ್ಯಪ್ರದೇಶ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಕಮಲ್ ನಾಥ್ ಗುರುವಾರ ರಾಜಿನಾಮೆ ನೀಡಿದ್ದಾರೆ
ಅವರ ರಾಜಿನಾಮೆಯನ್ನು ಕಾಂಗ್ರೆಸ್ ಅಂಗೀಕರಿಸಿದೆ ಮತ್ತು ಕಮಲ್ ನಾಥ್ ಅವರ ರಾಜಿನಾಮೆಯ ನಂತರ ಡಾ.ಗೋವಿಂದ್ ಸಿಂಗ್ ಅವರು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆದಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ನಾಥ್ ಅವರಿಗೆ ಪತ್ರ ಬರೆದಿದ್ದಾರೆ. ‘ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ನೀಡಿರುವ ರಾಜಿನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ. ಮಧ್ಯಪ್ರದೇಶದ ಸಿಎಲ್.ಪಿ ನಾಯಕರಾಗಿ ತಮ್ಮ ಕೊಡುಗೆಯನ್ನು ಪಕ್ಷವು ಮನಃಪೂರ್ವಕವಾಗಿ ಶ್ಲಾಘಿಸುತ್ತದೆ’ ಎಂದು ಹೇಳಿದ್ದಾರೆ.
2018ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಕಮಲ್ ನಾಥ್ ಸುಮಾರು 15 ತಿಂಗಳ ಕಾಲ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.
ಆದಾಗ್ಯೂ ಹಾಲಿ ಶಾಸಕರ ರಾಜಿನಾಮೆ ನೀಡಿದ ನಂತರ ರಾಜ್ಯದಲ್ಲಿ ರಾಜಕೀಯ ಪ್ರಕ್ಷುಬ್ದತೆಯ ನಂತರ ಕಾಂಗ್ರೆಸ್ ಸರ್ಕಾರ ಮಾರ್ಚ್ 2020ರಲ್ಲಿ ಪತನವಾಯಿತು. ನಾಥ್ ನಂತರ ಜುಲೈ 2020ರಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ ನಾಯಕನ ಹುದ್ದೆಯನ್ನು ವಹಿಸಿಕೊಂಡಿದ್ದರು.


